ಪಾಕ್ ಆಕ್ರಮಿತ ಕಾಶ್ಮೀರಕ್ಕಾಗಿ ಕೇಂದ್ರದಿಂದ ವಿಶೇಷ ಕಾರ್ಯತಂತ್ರ!!

ಗ್ವಾಲಿಯರ್:

      ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕಾಗಿ ಕೇಂದ್ರ ಸರ್ಕಾರ ವಿಶೇಷ ಕಾರ್ಯತಂತ್ರಗಳನ್ನು ರೂಪಿಸುತ್ತಿದೆ ಎಂದು ಕೇಂದ್ರ ಸಚಿವ ಹಾಗೂ ನಿವೃತ್ತ ಸೇನಾ ಮುಖ್ಯಸ್ಥ ವಿ.ಕೆ.ಸಿಂಗ್ ಅವರು ಶುಕ್ರವಾರ ಹೇಳಿದ್ದಾರೆ.

      ಗ್ವಾಲಿಯರ್ ನಲ್ಲಿ ಮಾತನಾಡಿದ ಅವರು, ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆ ಸನ್ನದ್ಧವಾಗಿ ನಿಂತಿದೆ. ಆದರೆ, ಕೇಂದ್ರದ ಆದೇಶಕ್ಕಾಗಿ ಕಾಯುತ್ತಿದೆ. ಪಿಒಕೆಗಾಗಿ ವಿಶೇಷ ಕಾರ್ಯತಂತ್ರಗಳನ್ನು ರೂಪಿಸಲಾಗಿದ್ದು, ಅದನ್ನು ಸಾರ್ವಜನಿಕವಾಗಿ ಬಹಿರಂಗ ಪಡಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. 

      ಈ ಹಿಂದೆ ಹೇಳಿಕೆ ನೀಡಿದ್ದ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರು, ತಮ್ಮ ಹೇಳಿಕೆ ಮೂಲಕ ಪಾಕಿಸ್ತಾನಕ್ಕೆ ಬಲವಾದ ಸಂದೇಶ ರವಾನಿಸಿ, ಪಿಓಕೆ ಕುರಿತು ಕೇಂದ್ರ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ. ಅದರ ಆದೇಶದಂತೆ ದೇಶದ ಸಂಸ್ಥೆಗಳು ಕಾರ್ಯನಿರ್ವಹಿಸುತ್ತದೆ. ಆದರೆ ಯಾವುದೇ ಸನ್ನಿವೇಶಕ್ಕೂ ಸೈನ್ಯ ಸಿದ್ಧವಿದೆ ಎಂದು ಒತ್ತಿ ಹೇಳಿದ್ದರು.

      ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ