ಬೆಂಗಳೂರು:
ಬೆಂಗಳೂರು ಸರಣಿ ಬಾಂಬ್ ಸ್ಫೋಟದ ರೂವಾರಿ ಎಂದೇ ಕರೆಸಿಕೊಳ್ಳುವ ಹಾಗೂ ಕೇರಳ ಮೂಲದ ಪಿಡಿಪಿ ಅಧ್ಯಕ್ಷ ಅಬ್ದುಲ್ ನಾಸಿರ್ ಮದನಿ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿ:ಳಿದು ಬಂದಿದೆ .
ಸೌಕ್ಯ ಹೊಲಿಸ್ಟಿಕ್ ಆರೋಗ್ಯ ಮತ್ತು ಆಯುರ್ವೇದ ಚಿಕಿತ್ಸಾ ಕೇಂದ್ರಕ್ಕೆ ಶಿಫ್ಟ್ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.ಮೂರು ನಾಲ್ಕು ದಿನಗಳ ಹಿಂದೆ ಮದನಿಯನ್ನು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. 2010ರ ಆಗಸ್ಟ್ 17 ರಂದು ಕೇರಳ ಪೊಲೀಸರು ಮದನಿಯನ್ನು ಬಂಧಿಸಿ ಬೆಂಗಳೂರು ಪೊಲೀಸರಿಗೆ ಹಸ್ತಾಂತರಿಸಿದ್ದರು ಮತ್ತು ಮದನಿಯನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇಡಲಾಗಿತ್ತು. 2014ರ ಜುಲೈ ತಿಂಗಳಿನಲ್ಲಿ ಕೋರ್ಟ್ ಮದನಿಗೆ ಷರತ್ತುಬದ್ಧ ಜಾಮೀನು ನೀಡಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








