ತುರುವೇಕೆರೆ:
ಚಲಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ನಲ್ಲೇ ಪ್ರಯಾಣಿಕನೊಬ್ಬ ಸಾವನ್ನಪ್ಪಿರುವ ದುರ್ಘಟನೆ ಮೈಸೂರಿನಿಂದ ಹಿರಿಯೂರು ತೆರಳುವ ಮಾರ್ಗ ಮಧ್ಯೆಯಲ್ಲಿ ನಡೆದಿದೆ.
ಹಿರಿಯೂರು ಗ್ರಾಮದ ಸುರೇಶ್ (40) ಮೃತಪಟ್ಟ ವ್ಯಕ್ತಿ. ಈತ ಇಂದು ಬೆಳಗ್ಗೆ ತನ್ನ ಕುಟುಂಬದ ಹೆಂಡತಿ ಮತ್ತು ಇಬ್ಬರು ಮಕ್ಕಳೊಂದಿಗೆ ಮೈಸೂರುನಿಂದ ಹಿರಿಯೂರು ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಬರುತ್ತಿದ್ದಾಗ ಬಸ್ ನಲ್ಲಿಯೇ ಕೊನೆಯುಸಿರೆಳೆದಿದ್ದಾನೆ.
ಮೃತಪಟ್ಟ ಸುರೇಶ್ ಗೆ ಆರೋಗ್ಯ ಸರಿ ಇರಲಿಲ್ಲ ಎಂದು ಪತ್ನಿ ತಿಳಿಸಿದ್ದಾರೆ. ಪಟ್ಟಣದ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಜನರು ಸೇರಿ ಪರಿಹಾರಕ್ಕಾಗಿ ಒತ್ತಾಯಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
