ನವದೆಹಲಿ :
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸಾರ್ವಜನಿಕ-ಖಾಸಗಿ ಸಹಭಾಗಿತ್ವ (ಪಿಪಿಪಿ) ಕ್ರಮದಲ್ಲಿ ಸುಮಾರು 950 ಕಿಮೀ ರಸ್ತೆ ನಿರ್ಮಾಣ ಮಾಡಲು ನಿರ್ಧರಿಸಿದ್ದು ಇದರ ಅಂದಾಜು ವೆಚ್ಚವು ಸರಿಸುಮಾರು 30,000 ಕೋಟಿಗಳಷ್ಟಿದೆ ಮತ್ತು ಈ ಯೋಜನೆ ಸುಮಾರು ಎಂಟು ರಾಜ್ಯಗಳಲ್ಲಿ ಹರಡಿರಿದೆ ಎಂದು ಸಾರಿಗೆ ಸಚಿವಾಲಯ ತಿಳಿಸಿದೆ.
ಪ್ಯಾನ್-ಇಂಡಿಯಾ ಆಧಾರದ ಮೇಲೆ ಎನ್ಎಚ್ಎಐ ವಿವಿಧ ವಲಯಗಳಲ್ಲಿ ನಿರ್ಮಾಣವಾಗಿರುವ ರಸ್ತೆಗಳನ್ನು ಗುರುತಿಸಿದೆ, ಇದನ್ನು ಪಿಪಿಪಿ ಮಾದರಿಯಲ್ಲಿ ಟೋಲ್ ಸಂಗ್ರಹಣೆ ಆಧಾರದ ಮೇಲೆ ನಿರ್ಮಿಸಲಾಗುವುದು ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ. ನಿರೀಕ್ಷಿತ ಹೂಡಿಕೆ ಅನ್ವಯ ಸಮಾಲೋಚನೆ ನಡೆಸಿ ಅದರ ಆಧಾರದ ಮೇಲೆ ಈ ವಿಸ್ತರಣೆಗಳನ್ನು ಆಯ್ಕೆ ಮಾಡಲಾಗಿದೆ ಎಂದು ಇಲಾಖೆ ಹೇಳಿದೆ.
ಈ ಯೋಜನೆಯಲ್ಲಿ ಆಂಧ್ರಪ್ರದೇಶ, ಹರಿಯಾಣ, ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡು, ಪಶ್ಚಿಮ ಬಂಗಾಳ, ಛತ್ತೀಸ್ಗಡ ಮತ್ತು ಮಧ್ಯಪ್ರದೇಶಗಳಲ್ಲಿ ಸುಮಾರು 30,000 ಕೋಟಿ ವೆಚ್ಚದಲ್ಲಿ ಕಾಮಗಾರಿ ನಡೆಸಲು ಭೂಮಿ ಗುರುತಿಸಲಾಗಿದ್ದು ಇದರ ಒಟ್ಟು ವಿಸ್ತೀರ್ಣ ಸುಮಾರು 950 ಕಿ.ಮೀ ಇರಲಿದೆ ಎಂದು ಸಚಿವಾಯ ತಿಳಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








