ನವದೆಹಲಿ:
ಮಹಾರಾಷ್ಟ್ರ, ಹರಿಯಾಣ ವಿಧಾನಸಭೆ ಚುನಾವಣೆ ಹಾಗೂ ಕರ್ನಾಟಕದ 15 ಕ್ಷೇತ್ರಗಳಿಗೆ ನಡೆಯಬೇಕಿರುವ ಉಪಚುನಾವಣೆ ನಡೆಯಬೇಕಿರುವ ಚುನಾವಣೆಗಳ ದಿನಾಂಕವನ್ನು ಆಯೋಗ ಪ್ರಕಟ ಮಾಡಿದೆ.
ಹರಿಯಾಣ ಮತ್ತು ಮಹಾರಾಷ್ಟ್ರ ರಾಜ್ಯಗಳ ವಿಧಾನಸಭಾ ಅವಧಿ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಆರೋರಾ ಪತ್ರಿಕಾಗೋಷ್ಠಿ ನಡೆಸಿ ಚುನಾವಣಾ ಮಾಹಿತಿಯನ್ನು ನೀಡಿದ್ದಾರೆ.
CEC: By-elections to 64 constituencies across Arunachal Pradesh, Bihar, Chhattisgarh, Assam, Gujarat, Himachal Pradesh, Karnataka, Kerala, MP, Meghalaya, Odisha, Puducherry, Punjab, Rajasthan, Sikkim, Tamil Nadu, Telangana &Uttar Pradesh, to be held on Oct 21 ;counting on Oct 24 pic.twitter.com/qs1EXsEVbV
— ANI (@ANI) September 21, 2019
ಮಹಾರಾಷ್ಟ್ರ ಹಾಗೂ ಹರಿಯಾಣದಲ್ಲಿ ಅಕ್ಟೋಬರ್ 21ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 24ಕ್ಕೆ ಫಲಿತಾಂಶ ಹೊರ ಬೀಳಲಿದೆ. ಇದೇ ವೇಳೆ ರಾಜ್ಯದ 15 ಕ್ಷೇತ್ರಗಳಿಗೂ ಉಪಚುನಾವಣೆ ನಡೆಯಲಿದೆ. ಇನ್ನು ರಾಜ್ಯದ 2 ಕ್ಷೇತ್ರಗಳ ಮೇಲೆ ನ್ಯಾಯಾಲಯ ತಡೆಯಾಜ್ಞೆ ನೀಡಿರುವುದರಿಂದ ಚುನಾವಣಾ ದಿನಾಂಕ ಘೋಷಿಸಲಾಗಿಲ್ಲ.
ಈ ಮೂಲಕ ಬಿಜೆಪಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗುವ ನಿರೀಕ್ಷೆಯಲ್ಲಿದ್ದ ಅನರ್ಹ ಶಾಸಕರಿಗೆ ಬಿಗ್ ಶಾಕ್ ಎದುರಾಗಿದ್ದು, ತಮ್ಮ ಅನರ್ಹತೆಯನ್ನು ಪ್ರಶ್ನಿಸಿ ಅನರ್ಹ ಶಾಸಕರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಅರ್ಜಿ ವಿಚಾರಣೆ ಇನ್ನೂ ಆರಂಭವಾಗದಿರುವ ಕಾರಣ ತಮ್ಮ ಕ್ಷೇತ್ರಗಳ ಉಪ ಚುನಾವಣೆಯನ್ನು ಮುಂದೂಡಬೇಕೆಂದು ಮನವಿ ಸಲ್ಲಿಸಿದ್ದು, ಆದರೆ ಚುನಾವಣಾ ಆಯೋಗ ಇದಕ್ಕೆ ಮಾನ್ಯತೆ ನೀಡಿಲ್ಲ.
ಇನ್ನು ಚುನಾವಣೆಯನ್ನು ಶಾಂತ ರೀತಿಯಲ್ಲಿ ನಡೆಸಲು ಹೆಚ್ಚಿನ ಭದ್ರತೆ ನಿಯೋಜಿಸುವುದಾಗಿ ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ