ಬೆಂಗಳೂರು
ಗುಂಡಿಕ್ಕಿ ಕೊಂದು ಕತ್ತರಿಸಿ ಆನೆ ದಂತ ಮಾರಾಟ ಮಾಡುತ್ತಿದ್ದ ಬೃಹತ್ ಜಾಲವನ್ನು ಬಲೆಗೆ ಕೆಡವಿರುವ ಸಿಐಡಿ ಅರಣ್ಯ ಘಟಕದ ಅಧಿಕಾರಿಗಳು ಮೂವರು ಆರೋಪಿಗಳನ್ನು ಬಂಧಿಸಿ ೧೦ ಆನೆದಂತಗಳನ್ನು ವಶಪಡಿಸಿಕೊಂಡಿದ್ದಾರೆ.
ಉಜಿರೆಯ ಎ.ಎಂ ಆಬ್ರಾಹಂ, ಕಣ್ಣೂರಿನ ಸುರೇಶ್ ಬಾಬು ಮತ್ತು ಹಾಸನದ ರಮೇಶ್ ಬಂಧಿತ ಆರೋಪಿಗಳಾಗಿದ್ದಾರೆ.ಆರೋಪಿಗಳು ದಂತಗಳನ್ನು ಶೇಖರಿಸಿದ್ದ ಉಜಿರೆಯ ತೋಟದ ಮನೆ ಮೇಲೆ ದಾಳಿ ನಡೆಸಿ ೫೧ ಕೆಜಿ ತೂಕದ ೧೦ ಆನೆ ದಂತಗಳನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿ ಆಬ್ರಾಹಂ ಕೋವಿಯಿಂದ ಆನೆಗಳನ್ನು ಕೊಂದು ದಂತಗಳನ್ನು ಸಂಗ್ರಹಿಸಿ ಅವುಗಳನ್ನು ಮಂಗಳೂರಿನ ಅನ್ವರ್ ಎಂಬಾತನ ಮೂಲಕ ಕರಾವಳಿ ಸೇರಿ ಹಲವೆಡೆ ಮಾರಾಟ ಮಾಡುತ್ತಿದ್ದ.ಬಂಧಿತರಿಂದ ೧೦ ಆನೆ ದಂತ, ಒಂದು ಕೋವಿ ಮತ್ತು ೮ ಜೀವಂತ ಮದ್ದುಗುಂಡು ವಶಕ್ಕೆ ಪಡೆಯಲಾಗಿದೆ.ಈ ಸಂಬಂಧ ಬೆಳ್ತಂಗಡಿ ವಲಯ ಅರಣ್ಯ ಕಚೇರಿಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರಿನ ಅನ್ವರ್ ಪರಾರಿಯಾಗಿದ್ದು, ಆರೋಪಿಗಾಗಿ ಶೋಧಕಾರ್ಯ ಮುಂದುವರಿದಿದೆ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








