ಬೆಂಗಳೂರು:

‘ಅನರ್ಹಗೊಂಡಿರುವ ಶಾಸಕರು ಉಪಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಿಲ್ಲ’ ಎಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಸಂಜೀವ್ ಕುಮಾರ್ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅನರ್ಹ ಶಾಸಕರು ಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕೆ ಸ್ಪೀಕರ್ ತಡೆ ಒಡ್ಡಿದ್ದಾರೆ. ಶಾಸಕರ ಮರುಪರಿಶೀಲನಾ ಅರ್ಜಿ ಸುಪ್ರೀಂ ಕೋರ್ಟ್ನಲ್ಲಿ ಇನ್ನೂ ಸ್ವೀಕೃತವಾಗಿಲ್ಲ. ಹೀಗಾಗಿ ಅನರ್ಹರು ಚುನಾವಣೆಯಲ್ಲಿ ಸ್ಪರ್ಧಿಸಲು ಆಗುವುದಿಲ್ಲ ಹೇಳಿದರು.
ರಾಜ್ಯದ 17 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಲ್ಲಿ ಉಪ ಚುನಾವಣೆ ಘೋಷಣೆಯಾಗಿದ್ದು ಇಂದಿನಿಂದಲೇ ಮಾದರಿ ಚುನಾವಣೆ ನೀತಿ ಸಂಹಿತೆ ಜಾರಿಗೆ ಬಂದಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ತಿಳಿಸಿದ್ದಾರೆ.
ಮಸ್ಕಿ, ರಾಜರಾಜೇಶ್ವರಿ ನಗರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಚುನಾವಣೆ ತಕರಾರು ಅರ್ಜಿ ಇರುವ ಕಾರಣ ಉಪ ಚುನಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








