ಹಾವೇರಿ :
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಹಾಗೂ ಹಿರೇಕೆರೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾಗಿದೆ. ಸೆಪ್ಟೆಂಬರ್ 23ರಂದು ಅಧಿಸೂಚನೆ ಪ್ರಕಟವಾಗಲಿದ್ದು, ಅಕ್ಟೋಬರ್ 21ರಂದು ಮತದಾನ ನಡೆಯಲಿದೆ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಕೃಷ್ಣ ಬಾಜಪೇಯಿ ಪತ್ರಿಕಾಗೋಷ್ಠಿಯಲ್ಲಿ ಉಪ ಚುನಾವಣೆ ಬಗ್ಗೆ ಮಾಹಿತಿ ನೀಡಿದರು.
“ಸೆಪ್ಟೆಂಬರ್ 23ರ ಸೋಮವಾರ ಅಧಿಸೂಚನೆ ಹೊರಡಿಸಲಾಗುವುದು. ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಶನಿವಾರದಿಂದಲೇ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿಗೆ ಬಂದಿದೆ” ಎಂದು ಹೇಳಿದರು.
ಸೋಮವಾರದಿಂದ ನಾಮಪತ್ರ ಸಲ್ಲಿಕೆ ಆರಂಭಗೊಳ್ಳಲಿದೆ. ಸೆಪ್ಟೆಂಬರ್ 30ರ ಸೋಮವಾರ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಅಕ್ಟೋಬರ್ 1ರ ಮಂಗಳವಾರ ನಾಮಪತ್ರ ಪರಿಶೀಲನೆ ನಡೆಯಲಿದೆ. ಅಕ್ಟೋಬರ್ 3ರ ಗುರುವಾರ ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ.
ಕ್ಟೋಬರ್ 21ರ ಸೋಮವಾರ ಮತದಾನ ನಡೆಯಲಿದೆ. ಅಕ್ಟೋಬರ್ 24ರ ಗುರುವಾರ ಮತ ಎಣಿಕೆ ಕಾರ್ಯ ನಡೆಯಲಿದೆ. ಅಕ್ಟೋಬರ್ 27ರಂದು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಚುನಾವನಾ ಫಲಿತಾಂಶ ಪ್ರಕಟಗೊಳ್ಳುವ ತನಕ ಮಾದರಿ ನೀತಿ ಸಂಹಿತೆ ಜಾರಿಯಲ್ಲಿ ಇರುತ್ತದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2019/09/collage-1569131245.jpg)