ಕಲಬುರ್ಗಿ :
ಶೀಘ್ರದಲ್ಲಿಯೇ 16 ಸಾವಿರ ಪೊಲೀಸ್ ಪೇದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ನಗರದಲ್ಲಿಂದು ನಡೆದ ಪಿಎಸ್ಐ ಹಾಗೂ ಆರ್ಎಸ್ಐ ನಿರ್ಗಮನ ಪಥ ಸಂಚಲನದಲ್ಲಿ ಪಾಲ್ಗೊಳ್ಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ 6000 ಕಾನ್ಸ್ಟೆಬಲ್ಗಳ ನೇಮಕಾತಿ ಪ್ರಕ್ರಿಯೆ ಚಾಲನೆಯಲ್ಲಿದೆ. ಶೀಘ್ರದಲ್ಲಿಯೇ 16,000 ಪೊಲೀಸ್ ಪೇದೆಗಳು ಹಾಗೂ 630 ಪಿಎಸ್ಐಗಳನ್ನು ಹಣಕಾಸು ಇಲಾಖೆಯೂ ನೇಮಕಾತಿಗೆ ಒಪ್ಪಿಗೆ ಸೂಚಿಸಿದೆ ಎಂದು ಮಾಹಿತಿ ನೀಡಿದರು.
ಪೊಲೀಸ್ ಇಲಾಖೆಯನ್ನು ಬಲಪಡಿಸುವ ಉದ್ದೇಶದಿಂದ ಮುಂಬರುವ ಬಜೆಟ್ನಲ್ಲಿ ಹೆಚ್ಚಿನ ಅನುದಾನ ಮೀಸಲಿಡಲಾಗುವುದು. ಮುಖ್ಯವಾಗಿ ಸೈಬರ್ ಕ್ರೈಂ ಪಡೆಯಲ್ಲಿ ತಾಂತ್ರಿಕವಾಗಿ ಮತ್ತಷ್ಟು ಸುಧಾರಿಸಲಾಗುವುದು. ಅಲ್ಲದೇ, ಮುಂದಿನ ಎರಡ್ಮೂರು ವರ್ಷದೊಳಗೆ ಪೊಲೀಸರಿಗೆ ಶೇ 60 ರಷ್ಟು ಮನೆಗಳನ್ನು ನಿರ್ಮಾಣ ಮಾಡಿಕೊಡಲಾಗುವುದು ಎಂದು ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ