ಚಿಕ್ಕಮಗಳೂರು:
ಕೆ.ಎಸ್.ಆರ್.ಟಿ.ಸಿ. ಬಸ್ಸೊಂದು ನಿಂತಿದ್ದ ಲಾರಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಕಡೂರು ತಾಲೂಕಿನ ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ರಾತ್ರಿ ನಡೆದಿದೆ.
ಶಿವಮೊಗ್ಗ ಮೂಲದ ಲಾರಿ ಚಾಲಕ ಶರವಣ(40) ಹಾಗೂ ಕಡೂರಿನ ಸರ್ವೆ ಡಿಪಾರ್ಟಮೆಂಟ್‍ನಲ್ಲಿ ಕೆಲಸ ಮಾಡುತ್ತಿದ್ದ ರುಚಿತಾ (22) ಮೃತ ದುರ್ದೈವಿಗಳು.
ಚಿಕ್ಕಮಗಳೂರಿನಿಂದ ಕೊಪ್ಪಳ ಜಿಲ್ಲೆಯ ಯಲಬುರ್ಗಕ್ಕೆ ಸೋಮವಾರ ರಾತ್ರಿ ಹೊರಟಿದ್ದ ಕೆಎಸ್ಸಾರ್ಟಿಸಿ ಬಸ್ ಕಡೂರು ತಾಲೂಕಿನ ಸಖರಾಯಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಹುಲಿಕೆರೆ ಕ್ರಾಸ್‌ನ ರಾಷ್ಟ್ರೀಯ ಹೆದ್ದಾರಿ-173ರಲ್ಲಿ ರಸ್ತೆ ಬದಿಯಲ್ಲಿ ಡೀಸೆಲ್ ಖಾಲಿಯಾಗಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದಿದೆ. ಪರಿಣಾಮ ಅಲ್ಲಿಯೆ ಇದ್ದ ಶರವಣ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ರುಚಿತಾ ಮೂಲತಃ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹಗರೆ ಗ್ರಾಮದ ನಿವಾಸಿ. ಘಟನೆಯಲ್ಲಿ ಒಟ್ಟು 6 ಜನರು ಗಂಭೀರವಾಗಿ ಗಾಯಗೊಂಡಿದ್ದು, ಅವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.
ಈ ಸಂಬಂಧ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ