ಇಸ್ಲಾಮಾಬಾದ್:
ನಗರದಲ್ಲಿ ಸಂಭವಿಸಿದ ಭೂಕಂಪದಲ್ಲಿ ಸಾವನ್ನಪ್ಪಿದವರ ಸಂಖ್ಯೆ 26ಕ್ಕೆ ಏರಿಕೆಯಾಗಿದ್ದು, ಪಾಕ್ ಆಕ್ರಮಿತ ಕಾಶ್ಮೀರ ಭಾಗದಲ್ಲಿ ಗಾಯಾಳುಗಳ ಸಂಖ್ಯೆ 300ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.
ಪಿಒಕೆ ಮತ್ತು ಭಾರತದ ಕೆಲವು ಭಾಗಗಳಲ್ಲಿ ಮಂಗಳವಾರ ಸಂಜೆ ಭಾರಿ ಕಂಪನ ಸಂಭವಿಸಿದ್ದು. ರಿಕ್ಟರ್ ಮಾಪಕದಲ್ಲಿ 6.2ರಷ್ಟು ತೀವ್ರತೆ ದಾಖಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭೂಕಂಪನದ ಕೇಂದ್ರಬಿಂದು ಮಿರ್‌ಪುರ್ ನ ಆಗ್ನೇಯಕ್ಕೆ ಒಂದು ಕಿ.ಮೀ ದೂರದಲ್ಲಿ ಮತ್ತು 10 ಕಿ.ಮೀ ಆಳದಲ್ಲಿ ದಾಖಲಾಗಿದೆ .ಇನ್ನು ಭೂಕಂಪನದಲ್ಲಿ 300ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಅವಶೇಷಗಳ ತೆರವು ಕಾರ್ಯಾಚರಣೆ ಭರದಿಂದ ಸಾಗಿದೆ. ಪಿಒಕೆಯಲ್ಲಿನ ಸರಿಸುಮಾರು ಎಲ್ಲಾ ರಸ್ತೆಗಳು ದೊಡ್ಡ ದೊಡ್ಡ ಕಂದಕಗಳಂತಾಗಿವೆ ಎಂದು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
