ಖ್ಯಾತ ಹಾಸ್ಯ ನಟ ವೇಣು ಮಾಧವ ಇನ್ನಿಲ್ಲ!!

ಹೈದರಾಬಾದ್ :

      ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ತೆಲುಗು ಚಿತ್ರರಂಗದ ಖ್ಯಾತ ಹಾಸ್ಯ ನಟ ವೇಣು ಮಾಧವ ವಿಧಿವಶರಾಗಿದ್ದಾರೆ.

      39 ವರ್ಷದ ವೇಣು ಮಾಧವ್ ಅನೇಕ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರನ್ನು ಸಿಕಂದರಬಾದ್‍ ನಲ್ಲಿರುವ ಯಶೋಧ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.

      ಈ ಮೊದಲು ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ ಲಿವರ್ ಕಸಿ ಮಾಡಿಸಿಕೊಳ್ಳುವಂತೆ ವೈದ್ಯರು ಸಲಹೆ ನೀಡಿದ್ದರು. ಆದರೆ ಡಿಸ್ಚಾರ್ಜ್‌ ಮಾಡಿಸಿಕೊಂಡು ಮನೆಗೆ ಬಂದ ಬಳಿಕ ಅವರ ಸ್ಥಿತಿ ಮತ್ತಷ್ಟು ಬಿಗಡಾಯಿಸಿತ್ತು.ಹಾಗಾಗಿ ನಿನ್ನೆ ಮತ್ತೆ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

      ಕೆಲ ವರ್ಷಗಳ ಹಿಂದೆಯೇ ವೇಣು ಮಾಧವಗೆ ಕಿಡ್ನಿ ಹಾಗೂ ಲಿವರ್ ಸಮಸ್ಯೆ ಕಾಣಿಸಿಕೊಂಡಿತ್ತು. ಹಾಗಾಗಿ ಅವರು ಸಿನೆಮಾದಲ್ಲೂ ನಟಿಸಿರಲಿಲ್ಲ. ವೇಣು ಮಾಧವ 170ಕ್ಕೂ ಹೆಚ್ಚು ತೆಲುಗು ಚಿತ್ರಗಳಲ್ಲಿ ನಟಿಸಿದ್ದಾರೆ. ತಮಿಳಿನಲ್ಲೂ ಅಭಿನಯಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link