ಗಾಂಧಿಜಿ ಅಂಚೆ ಚೀಟಿ ಬಿಡುಗಡೆ ಮಾಡಿದ ಪ್ಯಾಲೆಸ್ಟೇನ್..!

ರಮಲ್ಲಾ:

     ವಿಶ್ವ ಶಾಂತಿ ದಿನವಾಗಿ ಆಚರಿಸಲ್ಪಡುವ ಶ್ರೀ ಮಹಾತ್ಮ ಗಾಂಧಿಯವರ 150ನೇ ಜನ್ಮದಿನ ಅಂಗವಾಗಿ ಪ್ಯಾಲೆಸ್ಟೈನ್ ಸರ್ಕಾರ ವಿಶೇಷ ಅಂಚೇ ಚೀಟಿ ಬಿಡುಗಡೆ ಮಾಡಿದೆ ಈ ಮೂಲಕ ಭಾರತದ ರಾಷ್ಟ್ರಪಿತ ಮಹಾತ್ಮ ಗಾಂಧಿಗೆ ಗೌರವ ಸಮರ್ಪಣೆ ಮಾಡಿದೆ.

     ಪ್ಯಾಲೆಸ್ಟ್ಮೈನ್ ಸರ್ಕಾರ ಗಾಂಧೀಜಿಯವರ ಪರಂಪರೆ ಹಾಗೂ ಮೌಲ್ಯಗಳನ್ನು ಗೌರವಿಸುವ ಸಲುವಾಗಿ ಪ್ಯಾಲೆಸ್ಟೈನ್ ಮಂಗಳವಾರ ಅಂಚೆ ಚೀಟಿ ಬಿಡುಗಡೆ ಮಾಡಿದೆ. ಪ್ಯಾಲೆಸ್ಟೈನ್​​ನಲ್ಲಿರುವ ಭಾರತದ ಪ್ರತಿನಿಧಿ ಸುನೀಲ್ ಕುಮಾರ್ ಸಮ್ಮುಖದಲ್ಲಿ ಪ್ಯಾಲೆಸ್ಟೈನ್ ದೂರಸಂಪರ್ಕ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಇಶಾಕ್ ಸೆಡೆರ್ ಅಂಚೆ ಚೀಟಿ ಬಿಡುಗಡೆಗೊಳಿಸಿದರು. 

    ಮಹಾತ್ಮ ಗಾಂಧಿಯವರು ನಮಗೆ ತೋರಿದ ದಾರಿ ಮತ್ತು ಅಹಿಂಸಾ ತತ್ವಗಳು , ಮೌಲ್ಯಗಳು, ಬುದ್ಧಿವಂತಿಕೆ ಮತ್ತು ದೂರದೃಷ್ಟಿ ನಮ್ಮ ಜೀವನಕ್ಕೆ ಭದ್ರ ಬುನಾದಿ ಹಾಕುತ್ತವೆ ಎಂದು ಹೇಳಿದರು. ಮಹಾತ್ಮ ಗಾಂಧಿಯವರ 150ನೇ ಜನ್ಮದಿನೋತ್ಸವ ಯಶಸ್ವಿಗೊಳಿಸಲು ಭಾರತ ಸರ್ಕಾರ ಒಂದು ವರ್ಷದಿಂದ ರಮಲ್ಲಾ ಸೇರಿದಂತೆ ವಿವಿಧ ನಗರಗಳಲ್ಲಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿತ್ತು. ಅಪಾರ ಪ್ರಮಾಣದಲ್ಲಿ ಪ್ಯಾಲೆಸ್ಟೈನ್ ಯುವಕರು ಈ ಸ್ಪರ್ಧೆಗಳಲ್ಲಿ ಪಾಲ್ಗೊಂಡಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap