‘ಚಾಮುಂಡೇಶ್ವರಿ ಮೇಲಾಣೆ’ಅಕ್ರಮ ಆಸ್ತಿ ಮಾಡಿಲ್ಲ – ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ :

    ‘ಚಾಮುಂಡೇಶ್ವರಿ ಮೇಲಾಣೆ ನಾನು ಅಕ್ರಮ ಆಸ್ತಿ ಸಂಪಾದನೆ ಮಾಡಿಲ್ಲ’ ಎಂದು ಕಾಂಗ್ರೆಸ್‌ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಹೇಳಿದ್ದಾರೆ.

    ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಚಾಮುಂಡೇಶ್ವರಿ ಮೇಲಾಣೆ ನಾನು ಅಕ್ರಮ ಆಸ್ತಿ ಸಂಪಾದನೆ ಮಾಡಿಲ್ಲ. ಸೋಲಾರ್‌ ಪವರ್‌ ಪ್ಲಾಂಟ್‌ ನನ್ನ ಹೆಸರಿನಲ್ಲಿ ಇಲ್ಲ. ನನ್ನ ಹೆಸರಿನಲ್ಲಿ ಸೋಲಾರ್ ಪ್ಲ್ಯಾಂಟ್ ಇದೆ ಎಂದು ದಾಖಲೆ ತೋರಿಸಿದ್ರೆ ಅದನ್ನು ಚಾಮುಂಡಿ ತಾಯಿಯ ಆಣೆಯಾಗಿ ಸರ್ಕಾರದ ಬೊಕ್ಕಸಕ್ಕೆ ಬರೆದು ಕೊಡುತ್ತೇನೆ. ಅದಕ್ಕೆ ಸಂಬಂಧಪಟ್ಟಂತೆ ಯಾವುದೇ ದಾಖಲೆಗಳು ಇಲ್ಲ. ಹರ‍್ಷ ಶುಗರ್‌ಗೆ ಸಂಬಂಧಪಟ್ಟಂತೆ ಯಾವುದೇ ಅವ್ಯವಹಾರ ನಡೆದಿಲ್ಲ ಎಂದರು.

     ನನ್ನ ವಿರುದ್ಧ ಕೇಳಿ ಬಂದಿರುವ ಆರೋಪಗಳೆಲ್ಲ ಸತ್ಯಕ್ಕೆ ದೂರವಾದದ್ದು, ಕೆಲ ಸುದ್ದಿಗಳನ್ನು ವೈಭವೀಕರಿಸಿ ತೋರಿಸಲಾಗುತ್ತಿದೆ. ಅಪೆಕ್ಸ್ ಬ್ಯಾಂಕ್ ಕೇವಲ ನನ್ನ ತಮ್ಮನಿಗೆ ಮಾತ್ರ ಸಾಲ ನೀಡಿಲ್ಲ. ದೊಡ್ಡ ಮಟ್ಟದಲ್ಲಿ ವ್ಯವಹಾರ ಮಾಡುವ ಅಪೆಕ್ಸ್ ಬ್ಯಾಂಕ್ ಎಲ್ಲ ದಾಖಲಾತಿಗಳನ್ನು ಪಡೆದುಕೊಂಡು ಕಾನೂನುಬದ್ಧವಾಗಿ ಸಾಲ ನೀಡಿರುತ್ತದೆ. ನಮ್ಮ ಎಲ್ಲ ವ್ಯವಹಾರಗಳು ಕಾನೂನಿನ ಚೌಕಟ್ಟಿನಲ್ಲಿ ನಡೆದಿವೆ ಎಂದು ಸ್ಪಷ್ಟಪಡಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ