ನವದೆಹಲಿ:
ದೇಶದಲ್ಲಿ ಸಚಲನ ಸೃಷ್ಠಿಸಿದ್ದ ಐಎನ್ಎಕ್ಸ್ ಮೀಡಿಯಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ ನ್ಯಾಯಾಲಯದಲ್ಲಿ ಮಾಜಿ ವಿತ್ತ ಸಚಿವ ಪಿ. ಚಿದಂಬರಂ ಅವರ ಜಾಮೀನು ಅರ್ಜಿ ತಿರಸ್ಕಾರವಾದ ಹಿನ್ನೆಲೆಯಲ್ಲಿ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ಈ ಹಿಂದೆ ಚಿದಂಬರಂ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ್ದ ದೆಹಲಿಯ ಹೈಕೋರ್ಟ್,ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿದಂಬರಂ ಅವರು ಸಾಕ್ಷ್ಯಗಳ ಮೇಲೆ ಪ್ರಭಾವ ಬೀರುವ ಅವಕಾಶ ವಿರುವುದರಿಂದ ಜಾಮೀನು ನಿರಾಕರಿಸಿ ಆದೇಶ ನೀಡಿತ್ತು .ಜಾಮೀನು ತಿರಸ್ಕಾರವಾದ ಕಾರಣದಿಂದ ಚಿದಂಬರಂ ಅವರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ .ಚಿದಂಬರಂ ಅವರ ಪರವಾಗಿ ಕಾಂಗ್ರೆಸ್ ನ ಹಿರಿಯ ಮುಖಂಡ ಹಾಗು ವಕೀಲರಾದ ಕಪಿಲ್ ಸಿಬಲ್ ಅವರು ನ್ಯಾಯಾಲಯದಲ್ಲಿ ತ್ವರಿಗತಿಯಲ್ಲಿ ಅರ್ಜಿ ವಿಚಾರಣೆ ನಡೆಸಲು ವಿಶೇಷ ಅರ್ಜಿಯನ್ನು ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ