ಬೆಂಗಳೂರು :
ಅಕ್ರಮವಾಗಿ ರಕ್ತಚಂದನ ಸಾಗಿಸುತ್ತಿದ್ದ ಆರೋಪಿಗಳ ಬೆನ್ನತ್ತಿದ್ದ ಪೊಲೀಸರು ಅವರ ಮೇಲೆ ಫೈರಿಂಗ್ ನಡೆಸಿ ಬಂಧಿಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಬಳಿ ನಡೆದಿದೆ.
ಹೊಸಕೋಟೆ ತಾಲೂಕಿನ ಕಟ್ಟಿಗೇನಹಳ್ಳಿಯ ಕೆರೆಯ ಬಳಿ, ಅಕ್ರಮವಾಗಿ ರಕ್ತ ಚಂದನ ಸಾಗಿಸುತ್ತಿದ್ದಾರೆ ಎಂಬ ಮಾಹಿತಿ ಆಧರಿಸಿ, ಹೊಸಕೋಟೆ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದಾರೆ. ಮೊದಲು ರಕ್ತ ಚಂದನವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪಿಗಳಿಗೆ ವಾರ್ನ್ ಮಾಡಿದ್ದಾರೆ. ಆದರೇ ಪೊಲೀಸರ ಎಚ್ಚರಿಕೆ ಕರೆಗೂ ಕ್ಯಾರೇ ಎನ್ನದ ಆರೋಪಿಗಳು, ಪೊಲೀಸರ ಮೇಲೇ ದಾಳಿ ಮಾಡಲು ಯತ್ನಿಸಿದ್ದಾರೆ.
ಆರೋಪಿ ಪೈಕಿ ಜಾವೇದ್ ಶೇಖ್ ಪೊಲೀಸರ ಮೇಲೆ ಹಲ್ಲೆಗೆ ಮುಂದಾದ. ಹೀಗಾಗಿ ಆತ್ಮರಕ್ಷಣೆಗಾಗಿ ಡಿವೈಎಸ್ಪಿ ನಿಂಗಪ್ಪ ಸಕ್ರಿ ಆರೋಪಿ ಮೇಲೆ ಫೈರಿಂಗ್ ನಡೆಸಿದ್ದಾರೆ. ಅಲ್ಲದೇ ಮತ್ತೊಬ್ಬ ಆರೋಪಿ ಇಮ್ರಾನ್ ಕೂಡ ಬಂಧಿಸಿದ್ದಾರೆ. ಈ ಮೂಲಕ ಸುಮಾರು 300 ಕೆಜಿ ರಕ್ತ ಚಂದನ ಹಾಗೂ ಒಂದು ಸ್ಕಾರ್ಫಿಯೋ ಕಾರನ್ನು ವಶಪಡಿಸಿಕೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ