ಬೊಕ್ಕಸ ಖಾಲಿ : ಸಿಎಂ ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ..!

ಮಂಡ್ಯ

     ರಾಜ್ಯದ ಬೊಕ್ಕಸ ಖಾಲಿಯಾಗಿದೆ ಎಂಬ ಮುಖ್ಯಮಂತ್ರಿ ಯಡಿಯೂರಪ್ಪನವರ ಮಾತು ಬಿಜೆಪಿಯಲ್ಲಿ ನಾನಾ ವ್ಯಾಖ್ಯಾನಗಳಿಗೆ ಕಾರಣವಾಗಿದ್ದು, ಬೊಕ್ಕಸ ಖಾಲಿ ಬಗ್ಗೆ ಸಚಿವರು, ಶಾಸಕರು ವೈರುದ್ಧ್ಯದ ಹೇಳಿಕೆಗಳನ್ನು ನೀಡಿದ್ದಾರೆ.

     ಮಂಡ್ಯದಲ್ಲಿ ಮಾತನಾಡಿರುವ ಕಂದಾಯ ಸಚಿವ ಆರ್. ಅಶೋಕ್, ಬೊಕ್ಕಸದಲ್ಲಿ ಹಣ ಇಲ್ಲ ಎಂಬ ಬಗ್ಗೆ ಯಡಿಯೂರಪ್ಪನವರು ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ನೆರೆ ನಿರ್ವಹಣೆಗೆ ಹಣದ ಕೊರತೆ ಇಲ್ಲ ಎಂದರು. ನೆರೆ ನಿರ್ವಹಣೆ ಕಂದಾಯ ಇಲಾಖೆ ವ್ಯಾಪ್ತಿಯಲ್ಲೇ ಬರುತ್ತದೆ. ನನ್ನ ಪ್ರಕಾರ ನೆರೆ ನಿರ್ವಹಣೆಗೆ ಹಣಕಾಸಿನ ಕೊರತೆ ಇಲ್ಲ. ಈಗಾಗಲೇ ಹಣ ಬಿಡುಗಡೆ ಮಾಡಲಾಗಿದೆ. ಕೇಂದ್ರ ಸರ್ಕಾರ ಸಹ ರಾಜ್ಯದ ವರದಿಯನ್ನು ತಿರಸ್ಕರಿಸಿಲ್ಲ. ಕೆಲ ಸ್ಪಷ್ಟನೆಗಳನ್ನು ಕೇಳಿದೆ ಎಂದು ಅವರು ಹೇಳಿದರು.

    ವಿಜಯೇಂದ್ರ ಹೇಳಿಕೆ ಇತ್ತ ಮೈಸೂರಿನ ವರುಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಹಾಗೂ ಯಡಿಯೂರಪ್ಪನವರ ಪುತ್ರ ಬಿ.ವೈ. ವಿಜಯೇಂದ್ರ ಬೊಕ್ಕಸ ಖಾಲಿಯಾಗಿರುವುದು ಸತ್ಯ. ನನ್ನಲ್ಲಿ ಅಂಕಿ-ಅಂಶಗಳಿಲ್ಲ. ಮುಖ್ಯಮಂತ್ರಿಗಳು ಹೇಳಿರುವಾಗ ಅದು ಸತ್ಯವಿರುತ್ತದೆ ಎಂದರು.

    ಮುಖ್ಯಮಂತ್ರಿ ಯಡಿಯೂರಪ್ಪ ಅಸಹಾಯಕರಾಗಿಲ್ಲ. ಬೊಕ್ಕಸ ಖಾಲಿ ಇರುವುದರಿಂದ ಜನಪರ ಯೋಜನೆಗಳನ್ನು ಜಾರಿ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಬೇಸರಗೊಂಡಿದ್ದಾರೆ. ಅದು ಅಸಹಾಯಕತೆಯಂತೆ ಕಾಣುತ್ತಿದೆ ಎಂದು ಅವರು ವ್ಯಾಖ್ಯಾನಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link