50 ವರ್ಷ ದಾಟಿದ ಶಿಕ್ಷಕಿಯರಿಗೆ ಸರ್ಕಾರದಿಂದ ಸಿಹಿಸುದ್ದಿ

ಬೆಂಗಳೂರು,:

    ಐವತ್ತು ವರ್ಷ ದಾಟಿ ಶಿಕ್ಷಕಿಯರಿಗೆ ಕಡ್ಡಾಯ ವರ್ಗಾವಣೆ ರದ್ದುಗೊಳಿಸಲು ಸರ್ಕಾರ ನಿರ್ಧರಿಸಿದೆ. ತೀವ್ರ ಅಸಮಾಧಾನಕ್ಕೆ ಕಾರಣವಾಗಿದ್ದ ಶಿಕ್ಷಕರ ಕಡ್ಡಾಯ ವರ್ಗಾವಣೆ ನಿಯಮಗಳಿಗೆ ಸರ್ಕಾರ ಕೊನೆಗೂ ತಿದ್ದುಪಡಿ ತರಲು ಮುಂದಾಗಿದ್ದು, ಐವತ್ತು ವರ್ಷ ಮೇಲ್ಪಟ್ಟ ಶಿಕ್ಷಕರಿಗೆ ಕಡ್ಡಾಯ ವರ್ಗಾವಣೆಯಿಂದ ವಿನಾಯಿತಿ ನೀಡಲು ತೀರ್ಮಾನಿಸಲಾಗಿದೆ. ಈ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾತನಾಡಿ, ಶಿಕ್ಷಕರ ವರ್ಗಾವಣೆಯಲ್ಲಿನ ಗೊಂದಲಗಳ ನಿವಾರಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ.

  ಈ ನಿಟ್ಟಿನಲ್ಲಿ ವರ್ಗಾವಣೆ ಪ್ರಕ್ರಿಯೆಯನ್ನು ಇನ್ನುಮುಂದೆ ಕಡ್ಡಾಯ ವರ್ಗಾವಣೆ ಎನ್ನುವ ಮಾನವೀಯ ನೆಲೆಯಲ್ಲಿ ವಲಯ ವರ್ಗಾವಣೆ ಎಂದು ಮರು ನಾಮಕರಣ ಮಾಡಲಾಗುವುದು ಎಂದರು.

   ಪ್ರಸ್ತುತ ವರ್ಗಾವಣೆ ನಿಯಮಗಳಲ್ಲಿನ ಶಿಕ್ಷಕ ವಿರೋಧಿ ಅಂಶಗಳಿಗೆ ತಿದ್ದುಪಡಿ ತಂದು 50 ವರ್ಷ ವಯೋಮಾನ ಮೀರಿದ ಶಿಕ್ಷಕಿಯರು ಮತ್ತು 55 ವರ್ಷ ಮೇಲ್ಪಟ್ಟ ಶಿಕ್ಷಕರುಗಳಿಗೆ ಕಡ್ಡಾಯ ವರ್ಗಾವಣೆಯಿಂದ ವಿನಾಯಿತಿ ನೀಡಲಾಗುತ್ತದೆ ಎಂದು ತಿಳಿಸಿದರು. ನಿವೃತ್ತಿಗೆ ಕೆಲ ವರ್ಷಗಳಷ್ಟೇ ಬಾಕಿ ಇರುವ ವಯಸ್ಸಿನಲ್ಲಿ ಅವರು ಬೇರೆಡೆ ಹೋಗಿ ನೆಲೆಯೂರುವುದು ಬಹಳ ಕಷ್ಟ ಎಂಬ ಕಾರಣಕ್ಕೆ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link