ಬೆಂಗಳೂರು:
ಹಿರಿಯ ಕಾಂಗ್ರೆಸ್ ನಾಯಕ ಜಿ. ಪರಮೇಶ್ವರ್ ಅವರಿಗೆ ಸೇರಿದ ವಿವಿಧೆಡೆ ಗುರುವಾರದಿಂದ ನಡೆದ ಐಟಿ ದಾಳಿಗಳ ವೇಳೆ ಇಲ್ಲಿಯ ತನಕ 4.25 ಕೋಟಿ ರೂ. ನಗದು ಪತ್ತೆಯಾಗಿದೆ ಎನ್ನಲಾಗಿದೆ
ಬೆಂಗಳೂರು ಹಾಗೂ ತುಮಕೂರಿನಲ್ಲಿ ಪರಮೇಶ್ವರ್ ಅವರಿಗೆ ಸಂಬಂಧಿಸಿದ ಸುಮಾರು 30 ಕಡೆಗಳಲ್ಲಿ ದಾಳಿ ನಡೆದಿದ್ದು, ಪರಮೇಶ್ವರ್ ಅವರ ಸದಾಶಿವನಗರ ನಿವಾಸದಲ್ಲಿಯೇ 70 ಲಕ್ಷ ರೂ. ನಗದು ಪತ್ತೆಯಾಗಿದೆ. ಜೊತೆಗೆ ಆಪ್ತ, ನೆಲಮಂಗಲ ಪುರಸಭೆ ಸದಸ್ಯ ಶಿವಕುಮಾರ್ ನಿವಾಸದಲ್ಲಿ 1.8 ಕೋಟಿ ರೂ. ನಗದು ಐಟಿ ಅಧಿಕಾರಿಗಳಿ ಸಿಕ್ಕಿದೆ. ಐಟಿ ತನಿಖೆಯು ಪ್ರಾಥಮಿಕ ಹಂತದಲ್ಲಿದ್ದು, ಇನ್ನೂ ಎರಡು ದಿನ ಐಟಿ ದಾಳಿ ನಡೆಯುವ ಸಾಧ್ಯತೆ ಇದೆ ಎಂದು ಉನ್ನತ ಮೂಲಗಳು ಮಾಹಿತಿ ಲಭಿಸಿದೆ.
ಮೆಡಿಕಲ್ ಕಾಲೇಜು ಪ್ರವೇಶಾತಿ ಪರೀಕ್ಷೆಗಳ ಕುರಿತಂತೆ ಬಹು ಕೋಟಿ ತೆರಿಗೆ ವಂಚನೆ ಪ್ರಕರಣದ ಕುರಿತಂತೆ ಈ ದಾಳಿಗಳು ನಡೆದಿದ್ದು, ಈ ಕಾರ್ಯಾಚರಣೆಯಲ್ಲಿ 300ಕ್ಕೂ ಅಧಿಕ ಆದಾಯ ತೆರಿಗೆ ಅಧಿಕಾರಿಗಳು ಭಾಗಿಯಾಗಿದ್ದಾರೆ. ದಾಳಿ ಇನ್ನೂ ಮುಂದುವರಿದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
