ಬೆಂಗಳೂರು
ಮಾಧ್ಯಮಗಳನ್ನು ನಿರ್ಬಂಧಿಸಲು ಮುಂದಾದ ಸರ್ಕಾರಕ್ಕೆ ಮಾಧ್ಯಮಗಳು ಸಹ ತಕ್ಕ ಉತ್ತರ ನೀಡಿವೆ ಅದೇನೆಂದರೆ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಮಾಧ್ಯಮಗಳು ಬಹಿಷ್ಕರಿಸಿ ಪ್ರತಿಭಟನೆ ನಡೆಸಿವೆ .ವಿಧಾನಸೌಧದಲ್ಲಿ ಆಯೋಜಿಸಲಾಗಿದ್ದ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಭಹಿಷ್ಕರಿಸಿವೆ ಆದರೆ, ಮಾಧ್ಯಮ ಪ್ರತಿನಿಧಿಗಳಿಗೆ ಕಾರ್ಯಕ್ರಮಕ್ಕೆ ಹೋಗದಂತೆ ಪೊಲೀಸರು ತಡೆದರು.ಮಾಧ್ಯಮಗಳು ಕಾರ್ಯಕ್ರಮ ಬಹಿಷ್ಕರಿಸಿ ವಿಧಾನಸೌಧ ಮತ್ತು ವಿಕಾಸಸೌಧದ ನಡುವಿನ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿವೆ. ಪ್ರತಿಪಕ್ಷ ಕಾಂಗ್ರೆಸ್ ಸರ್ಕಾರದ ಈ ನಡೆಯನ್ನು ವಿರೋಧಿಸಿದ್ದು ಇದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಟ್ವೀಟ್ ಮಾಡಿದೆ.
ವಿಧಾನಸೌಧದಲ್ಲಿ ಬ್ಯಾಕ್ವೆಂಟ್ ಹಾಲ್ ನಲ್ಲಿ ನಡೆಯುತ್ತಿರುವ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಬಹಿಷ್ಕಾರ ಮಾಡಿ ಗಾಂಧಿ ಪ್ರತಿಮೆ ಬಳಿ ಮಾಧ್ಯಮಗಳಿಂದ ಸಾಂಕೇತಿಕ ಪ್ರತಿಭಟನೆ.
ಪಾರದರ್ಶಕ ಆಡಳಿತ ಕೊಡಲಾಗದ, ನೆರೆ ಪರಿಹಾರದಲ್ಲಿ ವಿಫಲವಾದ @BJP4Karnataka ಸರ್ಕಾರ ಮಾಧ್ಯಮ & ಜನತೆಯ ಹಕ್ಕುಗಳ ಮೇಲೆ ಆಕ್ರಮಣ ಮಾಡಿದೆ.#BJPbetraysKarnataka pic.twitter.com/XQPvffdjt3
— Karnataka Congress (@INCKarnataka) October 13, 2019
ಅಕ್ಟೋಬರ್ 10 ರಿಂದ ಮೂರು ದಿನಗಳ ಕಾಲ ನಡೆದ ವಿಧಾನಸಭೆ ಅಧಿವೇಶನಕ್ಕೆ ಖಾಸಗಿ ಮಾಧ್ಯಮಗಳನ್ನು ನಿಷೇಧಿಸಲಾಗಿತ್ತು. ಚಂದನ ವಾಹಿನಿ ಮೂಲಕ ಪ್ರಸಾರದ ಲಿಂಕ್ ಪಡೆದುಕೊಳ್ಳಲು ಸೂಚನೆ ನೀಡಲಾಗಿತ್ತು. ದೃಶ್ಯ ಮಾಧ್ಯಮ ಮಾತ್ರವಲ್ಲ, ಮುದ್ರಣ ಮಾಧ್ಯಮದ ಛಾಯಾಗ್ರಾಹಕರು ಫೋಟೋ ತೆಗೆಯದಂತೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಆದೇಶ ಹೊರಡಿಸಿದ್ದರು. ಇದನ್ನು ಖಂಡಿಸಿ ಮಾಧ್ಯಮ ಪ್ರತಿನಿಧಿಗಳು ಪ್ರತಿಭಟನೆಯನ್ನು ನಡೆಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
