ಬೆಂಗಳೂರು :
ಬಿಜೆಪಿಗೆ ಮತ ಹಾಕಿದರೆ ಮಹಾರಾಷ್ಟ್ರಕ್ಕೆ ಕರ್ನಾಟಕದಿಂದ ನೀರು ಬಿಡಲಾಗುವುದು ಎಂದು ಬಿಎಸ್ವೈ ಯಡಿಯೂರಪ್ಪ ಅವರು ಹೇಳಿದ್ದಾರೆ.
ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನೆಲೆ ಸಿಎಂ ಯಡಿಯೂರಪ್ಪ ಗಡಿಭಾಗದ ಪ್ರದೇಶದಲ್ಲಿ ಇಂದು ಪ್ರಚಾರದಲ್ಲಿ ನಿರತರಾಗಿದ್ದಾರೆ. ಈ ವೇಳೆ, ಸಿಎಂ ಮಹಾರಾಷ್ಟ್ರದ ಮತದಾರರು ಬಿಜೆಪಿಗೆ ಮತನೀಡಿದರೆ, ಕರ್ನಾಟಕದ ನೀರು ಹರಿಸುವುದಾಗಿ ಭರವಸೆ ನೀಡಿದ್ದಾರೆ.
ಈ ಹೇಳಿಕೆ ಸಾಕಷ್ಟು ಸುದ್ದಿಗೆ ಗ್ರಾಸವಾಗಿದ್ದು, ಮಹದಾಯಿ ಹೋರಾಟಗಾರರು ಸೇರಿದಂತೆ ಹಲವರು ಸಿಎಂ ಯಡಿಯೂರಪ್ಪ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನೀವು ಕರ್ನಾಟಕದ ಸಿಎಂ ಹೊರತು ಮಹಾರಾಷ್ಟ್ರದ ಸಿಎಂ ಅಲ್ಲ ಎಂದು ತಿರುಗೇಟು ನೀಡಿದ್ದಾರೆ.
ಮಹದಾಯಿ ಹಾಗೂ ಕೃಷ್ಣಾ ನದಿ ನೀರು ಹಂಚಿಕೆ ವಿಚಾರದಲ್ಲಿ ಮಹಾರಾಷ್ಟ್ರ ಹಿಂದೆನಿಂದಲೂ ಕಿರಿಕ್ ಮಾಡಿಕೊಂಡು ಬಂದಿದೆ. ಅಲ್ಲದೇ ಬಿಎಸ್ವೈ ಕರ್ನಾಟಕದ ತುಬಚಿ ಬಬಲೇಶ್ವರ ಏತ ನೀರಾವರಿ ಯೋಜನೆಯ ನೀರನ್ನು, ಬೋರಾ ನದಿಗೆ ಹರಿಸಲು ಬಿಎಸ್ವೈ ಚಿಂತನೆ ನಡೆಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ