ಮುಂಬೈ:
ಹಿರಿಯ ನಟ, ಅಮಿತಾಭ್ ಬಚ್ಚನ್ ಅವರನ್ನು ಕಳೆದ ರಾತ್ರಿ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಲಿವರ್ ಮತ್ತು ಯಕೃತ್ತು ಸಂಬಂಧಿಸಿದ ಖಾಯಿಲೆಯಿಂದ ಬಳಲುತ್ತಿರುವ ಅಮಿತಾಭ್ ಅವರನ್ನು ಮುಂಬೈನ ನಾನಾವತಿ ಆಸ್ಪತ್ರೆಗೆ ಸೇರಿಸಲಾಗಿದ್ದು, ಪರಿಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.
77 ವರ್ಷದ ಅಮಿತಾಭ್ ಬಚ್ಚನ್ ಅವರನ್ನು ಅ.15ರಿಂದ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಸದ್ಯ ಅವರನ್ನು ನೋಡಲು ಆಪ್ತ ಸಂಬಂಧಿಕರಿಗೆ ಮಾತ್ರ ಅವಕಾಶ ನೀಡಲಾಗುತ್ತಿದೆ. ಮಾಧ್ಯಮದವರಿಗೆ ಹೆಚ್ಚಿನ ಮಾಹಿತಿ ನೀಡಲು ಕುಟುಂಬಸ್ಥರು ನಿರಾಕರಿಸಿದ್ದಾರೆ ಎನ್ನಲಾಗಿದೆ.
ಅಮಿತಾಬ್ ಆಸ್ಪತ್ರೆಗೆ ದಾಖಲಾಗಿರುವ ವಿಷಯ ತಿಳಿದು ಅಭಿಮಾನಿಗಳು ಆತಂಕಕ್ಕೆ ಒಳಗಾಗಿದ್ದಾರೆ.
ಅಮಿತಾಭ್ ಅವರ ಲಿವರ್ ಶೇ.75ರಷ್ಟು ಈಗಾಗಲೇ ಹಾನಿಯಾಗಿದೆ ಎಂದು ಅವರೇ ಕಾರ್ಯಕ್ರಮವೊಂದರಲ್ಲಿ ಈ ಮೊದಲು ಹೇಳಿಕೊಂಡಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ