ತುಮಕೂರು:
ಜಿಲ್ಲೆಯ ಕುಣಿಗಲ್ ತಾಲೂಕಿನ ಯಡಿಯೂರಿನಲ್ಲಿರುವ ಸಿದ್ದಲಿಂಗೇಶ್ವರ ದೇಗುಲಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಕುಟುಂಬ ಸಮೇತರಾಗಿ ಬಂದು ವಿಶೇಷ ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ.
ಇಂದು ಯಡಿಯೂರಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಿಎಂ ಯಡಿಯೂರಪ್ಪ ಆಗಮಿಸಿದ್ದರು. ಈ ವೇಳೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕಾಲಿಗೆ ನೀರು ಹಾಕಿ ಬೆಂಬಲಿಗನೊಬ್ಬ ಪಾದಪೂಜೆ ಮಾಡಿರುವ ಘಟನೆ ನಡೆದಿದೆ.
ಮುಖ್ಯಮಂತ್ರಿ ಯಡಿಯೂರಪ್ಪ ಜೊತೆ ಪುತ್ರ ಬಿ ವೈ ರಾಘವೇಂದ್ರ, ಬಿ ವೈ ವಿಜಯೇಂದ್ರ, ಪುತ್ರಿಯರು, ಕಾಪು ಸಿದ್ದಲಿಂಗಸ್ವಾಮಿ ಹಾಗೂ ಕುಣಿಗಲ್ ಶಾಸಕ ರಂಗನಾಥ ಸೇರಿದಂತೆ ಸ್ಥಳೀಯ ಮುಖಂಡರು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ