ಬೆಂಗಳೂರು
ರಾಜ್ಯ ಸರ್ಕಾರ ಇಂದು ರಾಜ್ಯ ಸರ್ಕಾರಿ ನೌಕರರಿಗೆ ದೀಪಾವಳಿ ಹಬ್ಬಕ್ಕೆ ಉಡುಗೊರೆ ನೀಡಿದ್ದು ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ(ಡಿಎ) ಶೇ.4.75 ಹೆಚ್ಚಳ ಮಾಡಿ ಅಧಿಕೃತ ಆದೇಶ ಹೊರಡಿಸಿದೆ.ಅಖಿಲ ಭಾರತ ಬೆಲೆ ಸೂಚ್ಯಂಕ(price index) ಆಧರಿಸಿ ಕೇಂದ್ರ ಸರ್ಕಾರ ನೌಕರರಿಗೆ ಜುಲೈ 1ರಿಂದ ಪೂರ್ವಾನ್ವಯವಾಗುವಂತೆ ಕೇಂದ್ರ ಸರ್ಕಾರವು ಶೇ.5 ತುಟ್ಟಿಭತ್ಯೆ ಹೆಚ್ಚಳ ಮಾಡಿ ಆದೇಶ ಹೊರಡಿಸಿತ್ತು.
ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ನೇತೃತ್ವದ ತಂಡ ಇತ್ತೀಚೆಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ತುಟ್ಟಿಭತ್ಯೆ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳಿದ್ದ ಮನವಿ ಪತ್ರ ಸಲ್ಲಿಸಿದ್ದರು. ನಂತರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಯಡಿಯೂರಪ್ಪ, ನೌಕರರ ಮನವಿಯನ್ನು ಪುರಸ್ಕರಿಸಿ ತುಟ್ಟಿ ಭತ್ಯೆ ಹೆಚ್ಚಳಕ್ಕೆ ಸಮ್ಮತಿ ಸೂಚಿಸಿದ್ದಾರೆ ಎಂಧು ತಿಳಿದು ಬಂದಿದೆ. ತುಟ್ಟಿಭತ್ಯೆ ಹೆಚ್ಚಳದ ನಂರರ ಪ್ರತಿ ನೌಕರರಿಗೆ ಸರಾಸರಿ 1200 ರೂ.ನಿಂದ 4 ಸಾವಿರ ರೂ. ವರೆಗೆ ಮಾಸಿಕ ವೇತನ ಹೆಚ್ಚಳವಾಗಲಿದೆ ಎಂದು ಸಂಘವು ತಿಳಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








