ಪಾವಗಡ
ಪಟ್ಟಣದ ಎಂಎಜಿ ಪೆಟ್ರೋಲ್ ಬಂಕ್ ಬಳಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿದ ಘಟನೆ ನಡೆದಿದೆ.ಪಟ್ಟಣದ ತುಮಕೂರು ರಸ್ತೆಯಲ್ಲಿ ನಿಂತಿದ್ದ ಲಾರಿಗೆ ಬುಧವಾರ ರಾತ್ರಿ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ರಾಜವಂತಿ ಗ್ರಾಮದ ನಾಗರಾಜು (25) ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ರಾತ್ರಿ ನಾಗರಾಜು ಸಾವನ್ನಪ್ಪಿದ್ದಾರೆ. ಘಟನೆಯ ಸಂಬಂಧ ಪಟ್ಟಣದ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ