ಬೆಂಗಳೂರು
ನಗರದಲ್ಲಿ ಅಕ್ರಮವಾಗಿ ವಾಸಿಸುತ್ತಿರುವ ಆಫ್ರಿಕನ್ ಪ್ರಜೆಗಳ ಬಗ್ಗೆ ಬರುತ್ತಿರುವ ದೂರುಗಳ ಹಿನ್ನಲೆಯಲ್ಲಿ ರಾಮಮೂರ್ತಿ ನಗರ, ಹೆಣ್ಣೂರು ಇನ್ನಿತರ ಕಡೆಗಳಲ್ಲಿ ವಾಸಿಸುತ್ತಿರುವ ವಿದೇಶಿಗರ ಮನೆ ಮೇಲೆ ದಾಳಿ ನಡೆಸಿರುವ ಸಿಸಿಬಿ ಪೊಲೀಸರು, ಪಾಸ್‌ಪೋರ್ಟ್, ವೀಸಾ ಇಲ್ಲದ ೭ ಮಂದಿ ನೈಜೀರಿಯನ್ ಪ್ರಜೆಗಳನ್ನು ಬಂಧಿಸಿದ್ದಾರೆ.
ನೈಜೀರಿಯಾದ ಯಾಪೊ ಚಾರ್ಟೆಲ್, ಇಸಾಕ್, ಓಲ್ವಾಫೆಮಿ, ಪಾಲ್‌ಎಲಿಜೆಬತ್ ಹಾಗೂ ಫ್ರಾಂಕ್ ಪೀಟಱ್ಸ್ ಪಾಸ್‌ಪೋರ್ಟ್ ಹಾಗೂ ವೀಸಾ ಅವಧಿ ಪೂರ್ಣಗೊಂಡಿದ್ದರೂ ಅಕ್ರಮವಾಗಿ ವಾಸಿಸುತ್ತಿರುವುದು ದಾಳಿಯಲ್ಲಿ ಪತ್ತೆಯಾಗಿದೆ.ಆರೋಪಿಗಳ ವಿರುದ್ಧ ರಾಮಮೂರ್ತಿ ನಗರ ಹಾಗೂ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಮುಂದಿನ ತನಿಖೆ ಕೈಗೊಳ್ಳಲಾಗಿದೆ. ಇವರೆಲ್ಲರೂ ಶಿಕ್ಷಣ ಹಾಗೂ ವ್ಯಾಪಾರಿ ವೀಸಾದಡಿ ಬಂದು ನಗರದಲ್ಲಿ ನೆಲೆಸಿದ್ದು, ಪಾರ್ಸ್‌ಪೋರ್ಟ್ ವೀಸಾ ಅವಧಿ ಮುಗಿದಿದ್ದರೂ ಅಕ್ರಮವಾಗಿ ನೆಲೆಸಿರುವುದು ತನಿಖೆಯಲ್ಲಿ ಪತ್ತೆಯಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.
ನಗರದ ಬಾಗಲೂರು, ರಾಮಮೂರ್ತಿ ನಗರ, ಕೆಆರ್ ಪುರ, ಹೆಣ್ಣೂರು ಇನ್ನಿತರ ಕಡೆಗಳಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿಗರ ಮೇಲೆ ದಾಳಿಯನ್ನು ಸಿಸಿಬಿ ಪೊಲೀಸರು ಮುಂದುವರೆಸಿದ್ದು, ೭ ಮಂದಿ ಪಾಸ್‌ಪೋರ್ಟ್ ವೀಸಾ ಇಲ್ಲದ ನೈಜೀರಿಯನ್ ಪ್ರಜೆಗಳನ್ನು ಬಂಧಿಸಲಾಗಿದೆ. ಮುಂದಿನ ದಿನಗಳಲ್ಲಿ ನಿರಂತರವಾಗಿ ದಾಳಿ ನಡೆಸಲಾಗುವುದು ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








