ನವದೆಹಲಿ
ದೇಶದಲ್ಲಿ ಪ್ರಮುಖ ರಾಜ್ಯಗಳೆನಿಸಿರುವ ಮಹಾರಾಷ್ಟ್ರ ಮತ್ತು ಹರ್ಯಾಣ ವಿಧಾನಸಭೆಗೆ ಸೋಮವಾರ ಮತದಾನ ನಡೆಯಲಿದೆ.ಇನ್ನೂ ಎರಡೂ ರಾಜ್ಯಗಳಲ್ಲಿ ಬಿಜೆಪಿ ಸರ್ಕಾರವಿದ್ದು, ಚುನಾವಣಾ ಫಲಿತಾಂಶ ಕುತೂಹಲಕ್ಕೆ ಕಾರಣವಾಗಿದೆ. ಮಹಾರಾಷ್ಟ್ರದಲ್ಲಿ ದೇವೇಂದ್ರ ಫಡ್ನವೀಸ್, ಹರ್ಯಾಣದಲ್ಲಿ ಎಂ. ಎಲ್. ಕಟ್ಟರ್ ಮೊದಲ ಬಾರಿ ಮುಖ್ಯಮಂತ್ರಿಯಾಗಿ 5 ವರ್ಷದ ಆಡಳಿತ ಪೂರ್ಣಗೊಳಿಸಿದ್ದು ಈ ಇಬ್ಬರೂ ಮರು ಆಯ್ಕೆ ಬಯಸಿ ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ.
ಅಕ್ಟೋಬರ್ 21ರ ಸೋಮವಾರ ಎರಡೂ ರಾಜ್ಯಗಳಲ್ಲಿ ಮತದಾನ ನಡೆಯಲಿದೆ. ಅಕ್ಟೋಬರ್ 24ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಚುನಾವಣಾ ಆಯೋಗ ತಿಳಿಸಿದೆ. ಲೋಕಸಭಾ ಚುನಾವಣೆ ಬಳಿಕ ನಡೆಯುತ್ತಿರುವ ಮೊದಲ ವಿಧಾನಸಭಾ ಚುನಾವಣೆ ಇದಾಗಿರುವುದರಿಂದ ಸಹಜವಾಗಿಯೆ ಕುತೂಹಲ ಹೆಚ್ಚಾಗಿದೆ ಯಾರ ಪಾಲಿಗೆ ವಿಜಯ ದೊರಕುವುದೋ ಕಾದುನೋಡಬೇಕಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ