ಬೆಂಗಳೂರು:
ಮನೆಯೊಂದರಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿಯ ಕೆನ್ನಾಲಗೆಗೆ ಸಿಲುಕಿ ಇಬ್ಬರು ಮಕ್ಕಳು ಮೃತಪಟ್ಟು ತಂದೆತಾಯಿ ಗಂಭೀರ ಗಾಯಗೊಂಡ ಘಟನೆ ಕಾಟನ್ ಪೇಟೆಯ ಭಕ್ಷಿ ಗಾರ್ಡನ್ ಎಂಬಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದೆ.
ಮೃತ ದುರ್ದೈವಿ ಮಕ್ಕಳನ್ನು ಕಾವೇರಿ (21) ಶ್ರೀಕಾಂತ್ (13) ಎಂದು ಗುರುತಿಸಲಾಗಿದೆ. ಘಟನೆಯಿಂದಾಗಿ ಇವರ ಪೋಷಕರಾದ ಮುರಳಿ ಹಾಗೂ ಗೀತಾ ಗಂಭೀರ ಗಾಯಗೊಂಡಿದ್ದು, ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಬೆಳಗ್ಗಿನ ಜಾವ ಶಾರ್ಟ್ ಸರ್ಕ್ಯೂಟ್ ಸಂಭವಿಸಿ, ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
