ನವದೆಹಲಿ
ದೀಪಾವಳಿ ಸಮಯದಲ್ಲಿ ದೇಶದ ರಾಜಧಾನಿ ದೆಹಲಿ ಮತ್ತು ಆಸುಪಾಸಿನ ಆಯಕಟ್ಟಿನ ಪ್ರದೇಶಗಳ ಮೇಲೆ ಭಯೋತ್ಪಾದಕರ ದಾಳಿ ನಡೆಯಬಹುದು ಎಂಬ ಹಿನ್ನೆಲೆಯಲ್ಲಿ ದೆಹಲಿಯಾದ್ಯಂತ ಬಿಗಿಭದ್ರತೆ ಕಲ್ಪಿಸಲಾಗಿದೆ. ಜನನಿಬಿಡ ಮಾರುಕಟ್ಟೆ ಪ್ರದೇಶಗಳು, ಪ್ರಧಾನಮಂತ್ರಿ ಕಚೇರಿ, ಸೇನಾಭವನ, ಸಂಸತ್‍ಭವನ ಮತ್ತು ರಾಷ್ಟ್ರಪತಿ ಭವನಕ್ಕೆ ಈಗಾಗಲೇ ಬಿಗಿಭದ್ರತೆ ಒದಗಿಸಲಾಗಿದೆ.
ಮಾರುಕಟ್ಟೆ ಪ್ರದೇಶಗಳ ಮೇಲೂ ಸಹ ಪೊಲೀಸರು ಹದ್ದಿನ ಕಣ್ಣು ಇಟ್ಟಿದ್ದಾರೆ. ಜಾಮಾ ಮಸೀದಿ, ದೆಹಲಿ ಪೊಲೀಸ್ ಮುಖ್ಯ ಕಚೇರಿ, ಪ್ರೀತ್ ವಿಹಾರ್, ಆನಂದ್ ವಿಹಾರ್, ರೋಸ್ ಅವೆನ್ಯೂ ನ್ಯಾಯಾಲಯದ ಆವರಣ ಮುಂತಾದ ಆಯಕಟ್ಟಿನ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಿಸಲಾಗುವುದು ಎಂದು ದೆಹಲಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಉಗ್ರರ ದಾಳಿಯ ಬಗ್ಗೆ ಯಾವುದೇ ನಿರ್ದಿಷ್ಟ ಮಾಹಿತಿ ಬಂದಿಲ್ಲ. ಆದರೆ ದೀಪಾವಳಿಯ ಸಮಯದಲ್ಲಿ ಶಾಂತಿ, ಸುವ್ಯವಸ್ಥೆ, ಭದ್ರತೆ ಕಾಪಾಡುವ ದೃಷ್ಟಿಯಿಂದ ಆಯಕಟ್ಟಿನ ಜಾಗಗಳಿಗೆ, ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ, ಹೆಚ್ಚಿನ ನಿಗಾ ವಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ