ನಮ್ಮನ್ನು ಖರೀದಿಸಲು ನಾವೇನು ದನಗಳೆ : ಬಿ ಸಿ ಪಾಟೀಲ್

ಮೈಸೂರು

    ನಮ್ಮನ್ನ ಖರೀದಿಸಲು ನಾವೇನು ದನ, ಕುರಿ, ಕೋಳಿಗಳಲ್ಲ. ಮಾರಾಟ, ಖರೀದಿ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಚೆನ್ನಾಗಿ ಗೊತ್ತಿದೆ ಎಂದು ಅನರ್ಹ ಶಾಸಕ ಬಿ.ಸಿ ಪಾಟೀಲ್ ತಿರುಗೇಟು ನೀಡಿದ್ದಾರೆ.ಶಾಸಕರನ್ನು ದನ, ಕುರಿ, ಕೋಳಿಗಳಂತೆ ಬಿಜೆಪಿಯವರು ಖರೀದಿ ಮಾಡಿದ್ದಾರೆ ಎಂದು ಟೀಕಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ ಅವರ ಸಂಸ್ಕೃತಿಯನ್ನು ತೋರಿಸುತ್ತದೆ ಎಂದು ಅವರು ತಿರುಗೇಟು ನೀಡಿದ್ದಾರೆ.

     ಕಾಂಗ್ರೆಸ್ ನಲ್ಲಿ ನಮ್ಮನ್ನು ಹೇಗೆ ನಡೆಸಿಕೊಂಡರು ಎಂಬುದನ್ನು ಸಿದ್ದರಾಮಯ್ಯ ಅವರು ಒಮ್ಮೆ ಇತಿಹಾಸ ನೆನಪು ಮಾಡಿಕೊಡಲಿ. ಕಾಂಗ್ರೆಸ್ ನಲ್ಲಿ ಎಲ್ಲವೂ ಸರಿಯಾಗಿದ್ದರೆ 14 ಮಂದಿ ಪಕ್ಷದಿಂದ ಹೊರಬರುವ ಅಗತ್ಯವೇನಿತ್ತು ಎಂದು ಪ್ರಶ್ನಿಸಿದ್ದಾರೆ. ಸಮನ್ವಯ ಸಮಿತಿ ಅಧ್ತಕ್ಷರಾಗಿ ಸಿದ್ದರಾಮಯ್ಯ ಅವರು ಎಲ್ಲರನ್ನು ಹೇಗೆ ನಡೆಸಿಕೊಂಡರು ಅನ್ನುವುದು ಎಲ್ಲರಿಗೂ ಗೊತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಂತು ಕುಟುಂಬಕ್ಕೆ ಮಾತ್ರ ಸೀಮಿತರಾದರು. ಪಕ್ಷದಲ್ಲಿ ನಮ್ಮ ಕಷ್ಟ ಸುಖ ಕೇಳೋರೆ ದಿಕ್ಕಿರಲಿಲ್ಲ. ಹಾಗಾಗಿ ನಾವೆಲ್ಲ ಧೃಡ ತೀರ್ಮಾನ ಮಾಡಬೇಕಾಯಿತು ಈಗಲೂ ಸಹ ನಾವೆಲ್ಲಾ ಒಟ್ಟಾಗಿಯೇ ಇದ್ದೇವೆ. ಪರಿಸ್ಥಿತಿಯನ್ನು ಒಟ್ಟಾಗಿಯೇ ಎದುರಿಸುತ್ತೇವೆ ಎಂದು ತಿಳಿಸಿದರು.

    ಸಿದ್ದರಾಮಯ್ಯ ಉದ್ದೇಶಪೂರ್ವಕವಾಗಿ ನನಗೆ ಮಂತ್ರಿ ಸ್ಥಾನ ಕೈತಪ್ಪುವಂತೆ ಮಾಡಿದ್ರು. ಅನರ್ಹ ಶಾಸಕರು ಕಾಂಗ್ರೆಸ್ ಬಿಡಲು ಕಾರಣವೇನು ಅಂತಾ ಮೊದಲು ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಬಿ.ಸಿ.ಪಾಟೀಲ್ ಹೇಳಿದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ  

Recent Articles

spot_img

Related Stories

Share via
Copy link
Powered by Social Snap