ಪಾವಗಡ
ಪೆಮ್ಮನಹಳ್ಳಿ ಗೊಲ್ಲರಹಟ್ಟಿಯಲ್ಲಿನ ವಿವಿಧ ಅಭಿವೃದ್ದಿ ಕಾಮಗಾರಿಗಳ ಭೂಮಿಪೂಜೆಯನ್ನು ಇದೇ ತಿಂಗಳಲ್ಲಿ ನೆರವೇರಿಸಲಾಗುವುದೆಂದು ಸಂಸದ ಎ.ನಾರಾಯಣ ಸ್ವಾಮಿ ತಿಳಿಸಿದರು.ತಾಲ್ಲೂಕಿನ ದೊಡ್ಡಹಳ್ಳಿ ಗ್ರಾಮದ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯಲ್ಲಿ ಸೋಮವಾರ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದರು.
ವಸತಿ ಶಾಲೆಯ ಸಮಸ್ಯೆಗಳ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಮಾಹಿತಿ ಪಡೆದ ಅವರು, ತುಮಕೂರು ಜೆಡಿರವರಿಗೆ ಕರೆ ಮಾಡಿ, ವಸತಿ ಶಾಲೆಯಲ್ಲಿ ಮೂಲಭೂತ ಸೌಲಭ್ಯಗಳು ಸೇರಿದಂತೆ ಯಾವುದೇ ರೀತಿಯಲ್ಲಿ ಮಕ್ಕಳಿಗೆ ಕೊರತೆ ಎದುರಾಗದಂತೆ ವ್ಯವಸ್ಥೆ ಮಾಡಲು ತಿಳಿಸಿದರು. ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಪೆಮ್ಮನಹಳ್ಳಿ ಜನತೆ ನನ್ನ ಆಗಮನಕ್ಕಾಗಿ ಕಾಯುತ್ತಿದ್ದು, ಸುಮಾರು 70 ಲಕ್ಷ ರೂ. ವೆಚ್ಚದ ವಿವಿಧ ಅಭಿವೃದ್ದಿ ಕಾಮಗಾರಿಗಳ ಭೂಮಿಪೂಜೆಗೆ ಇದೇ ತಿಂಗಳಲ್ಲಿ ದಿನಾಂಕ ನಿಗದಿಪಡಿಸಲಾಗುವುದು ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ