ಪೊಲೀಸರಿಂದ 6 ಕೆಜಿ 372 ಗ್ರಾಂ ಗಾಂಜಾ ವಶ…!

ಬೆಂಗಳೂರು

       ನಗರದ ವಿವಿಧೆಡೆ ಗಾಂಜಾ ಮಾರಾಟ ಮಾಡುತ್ತಿದ್ದ ಜಾಲವನ್ನು ಬೇಧಿಸಿರುವ ನಗರ ಪೊಲೀಸರು ವಿದೇಶಿ ಪ್ರಜೆ ಸೇರಿ 35 ಮಂದಿ ಆರೋಪಿಗಳನ್ನು ಬಂಧಿಸಿ, 06 ಕೆಜಿ 372 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.ಮಲ್ಲೇಶ್ವರಂ, ಯಶವಂತಪುರ, ಜೆಸಿ ನಗರದ ಉಪ ವಿಭಾಗದ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ಕೈಗೊಂಡ ಪೊಲೀಸರು 24 ಮಂದಿ ಆರೋಪಿಗಳ ಜಾಲ ಬೇಧಿಸಿ ೧೨ ಪ್ರಕರಣಗಳನ್ನು ಪತ್ತೆ ಹಚ್ಚಿದ್ದಾರೆ.

     ಇದಲ್ಲದೆ ಗಾಂಜಾ ಮಾರಾಟವನ್ನೇ ವೃತ್ತಿ ಮಾಡಿಕೊಂಡಿದ್ದ ೩೭ ಮಂದಿಯನ್ನು ಬಂಧಿಸಿ ಅವರ ಮೇಲೆ ಭದ್ರತಾ ಕಾಯ್ದೆಯಡಿ ೨೮ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಉತ್ತರ ವಿಭಾಗದ ಡಿಸಿಪಿ ಶಶಿಕುಮಾರ್ ತಿಳಿಸಿದರು.ಶಾಲಾ ಮತ್ತು ಕಾಲೇಜುಗಳ ಬಳಿ ಇರುವ ಅಂಗಡಿಗಳ ಮೇಲೆ ದಾಳಿ ನಡೆಸಿ ಬೀಡಿ, ಸಿಗರೇಟು ಇನ್ನಿತರ ಮತ್ತು ತರಿಸುವ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ೨೨೧ ಪ್ರಕರಣಗಳನ್ನು ದಾಖಲಿಸಲಾಗಿದೆ.

       ಕಳೆದ 3-4 ದಿನಗಳಿಂದ ಸತತ ದಾಳಿ ನಡೆಸಿ ಮಾದಕ ವಸ್ತು ಸೇವನೆ ಹಾಗೂ ಮಾರಾಟವನ್ನು ಬೇಧಿಸಿರುವ ಕೇಂದ್ರ ವಿಭಾಗದ ಪೊಲೀಸರು ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಏಳು ಮಂದಿಯನ್ನು ಕೇಂದ್ರ ವಿಭಾಗದ ಪೊಲೀಸರು ಬಂಧಿಸಿ 8 ಕೆ.ಜಿ. ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

      ವೆಂಕಟರಾಮನ್, ಹೇಮಂತಾ, ವೆಂಕಟೇಗೌಡ, ಸುಬ್ರಮಣ್ಯ, ಡೇರಿಕ್ ಸುಬೋದ್ ಹಾಗೂ ಶ್ರೀಧರ್ ಹತ್ತಿ ಬಂಧಿತ ಆರೋಪಿಗಳಾಗಿದ್ದಾರೆ.ಆರೋಪಿಗಳು ವಿವೇಕಾನಗರ, ಅಶೋಕ್ ನಗರ, ಇನ್ನಿತರ ಕೇಂದ್ರ ವಿಭಾಗದ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ಕಾಲೇಜು ವಿದ್ಯಾರ್ಥಿಗಳು ಯುವಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಡಿಸಿಪಿ ಚೇತನ್ ಸಿಂಗ್ ತಿಳಿಸಿದ್ದಾರೆ.

     ಬಂಧಿತ ಆರೋಪಿಗಳಲ್ಲಿ ವಿದೇಶಿ ಪ್ರಜೆಯೊಬ್ಬ ಸೇರಿದ್ದು ಆರೋಪಿಗಳ ಬಂಧನದಿಂದ ೩ ಪ್ರಕರಣ ಪತ್ತೆಯಾಗಿದ್ದು ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ  

Recent Articles

spot_img

Related Stories

Share via
Copy link