ತುಮಕೂರು:
ನಗರದ ಹೊರವಲಯದಲ್ಲಿ ಇಂದು ರಾತ್ರಿ 8ಗಂಟೆ ಸುಮಾರಿಗೆ ಪೆರ್ಮನಹಳ್ಳಿಯ ಸಮೀಪದಲ್ಲಿ ಲಾರಿಗೆ ಬೈಕ್ ಡಿಕ್ಕಿ ಹೊಡೆದು ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.
ಚಲಿಸುತ್ತಿದ್ದ ಲಾರಿಗೆ ಹಿಂಬದಿಯಲ್ಲಿ ಬಂದ ದ್ವಿಚಕ್ರ ವಾಹನವು ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರ ಪರಿಸ್ಥಿತಿಯೂ ಗಂಭೀರವಾಗಿದ್ದು ಅವರನ್ನು ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ , ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಮುಂದುವರೆಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
