ಬೆಂಗಳೂರು
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವುಂಟಾದ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ ಮತ್ತು ಮಲೆನಾಡ ಭಾಗಗಳಲ್ಲಿ ಚಂಡಮಾರುತ ಭೀತಿ ಎದುರಾಗಿರುವ ಬೆನ್ನಲ್ಲೇ ಹಿಂದೂಮಹಾಸಾಗರದಲ್ಲಿ ‘ಬುಲ್ಬುಲ್’ ಹೆಸರನ ಚಂಡಮಾರುತ ನ. 1 ಮತ್ತ 2 ರಂದು ಬಂಗಾಳಕೊಲ್ಲಿಯಲ್ಲಿ ಅಪ್ಪಳಿಸುವ ಹಿನ್ನೆಲೆಯಲ್ಲಿ ಭಾರಿ ಮಳೆಯಾಗಲಿದೆ ಎನ್ನುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.
ಕ್ಯಾರ್ ಚಂಡಮಾರುತದ ಬಳಿಕ ಅ. 27 ರಿಂದ ಬಂಗಾಳಕೊಲ್ಲಿಯಲ್ಲಿ ಮಹಾ ಚಂಡಮಾರುತ ಅಪ್ಪಳಿಸಲಿದ್ದು, ತಮಿಳುನಾಡು, ಪುದುಚೆರಿ, ಕೇರಳದಲ್ಲಿ ರಣ ಮಳೆಯಾಗುವ ನಿರೀಕ್ಷೆ ಇದೆ. ಇದಾದ ಬಳಿಕ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.ರಾಜ್ಯದ ಕರಾವಳಿಯ ಜಿಲ್ಲೆಗಳಲ್ಲಿ ‘ಕ್ಯಾರ್’ ಚಂಡಮಾರುತ ಅಪ್ಪಳಿಸಲಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ನೀಡಿ ಕಟ್ಟೆಚ್ಚರ ಘೋಷಿಸಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳು ಹಾಗೂ ಮೂಡುಗೆರೆ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಕ್ಯಾರ್ ಚಂಡಮಾರುತ ಗಾಳಿ-ಮಳೆ ಹೊತ್ತು ತರಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಭಾರಿ ಗಾಳಿ-ಮಳೆಯಾಗುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ಹಾಗೂ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ನಿನ್ನೆಯಿಂದಲೇ ಮಳೆಯಾಗುತ್ತಿದ್ದು, ಸಮುದ್ದದ ಅಲೆಗಳು ಅಬ್ಬರಿಸುತ್ತಿದ್ದು, ಸಮುದ್ರದ ಕೊರೆತ ಉಂಟಾಗಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕಿಳಿಯದಂತೆ ಜಿಲ್ಲಾಡಳಿತ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಭಾರಿ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿಗಳು ಸರ್ಕಾರಿ ಅನುದಾನಿತ ಹಾಗೂ ಖಾಸಗಿ ಶಾಲಾ-ಕಾಲೇಜುಗಳಿಗೆ ಜಿಲ್ಲಾಧಿಕಾರಿ ಸಿಂಧುರೂಪೇಶ್ ರಜೆ ಘೋಷಿಸಿದ್ದಾರೆ.
ಉಡುಪಿ ಜಿಲ್ಲೆಯಲ್ಲೂ ಶಾಲಾ-ಕಾಲೇಜುಗಳಿಗೂ ಜಿಲ್ಲಾಧಿಕಾರಿ ಜಿ. ಜಗದೀಶ್ ರಜೆ ನೀಡಿದ್ದು, ಅಗತ್ಯ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವಂತೆ ಸೂಚಿಸಿದ್ದಾರೆ.ಗೋವಾದ ‘ಬೇತುಲ್’ ಅಲೆ ಉಬ್ಬರಕ್ಕೆ ಮುಳುಗುತ್ತಿದ್ದ ದೋಣಿಯನ್ನು ರಕ್ಷಣೆ ಮಾಡಲಾಗಿದೆ. ಮುರುಡೇಶ್ವರ ಕಡಲತೀರದಲ್ಲಿ ಅಂಗಡಿಗಳಿಗೆ ಸಮುದ್ರದ ಅಲೆಗಳು ಅಪ್ಪಳಿಸಿದ್ದರಿಂದ ವಸ್ತುಗಳೆಲ್ಲ ಕೊಚ್ಚಿ ಹೋಗಿದ್ದು, ಅಂಗಡಿ ಮಾಲೀಕರು ಆತಂಕಕ್ಕೆ ಸಿಲುಕುವಂತೆ ಮಾಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








