ಬೆಂಗಳೂರು :

ಜೈಲು ಸೇರಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರು ಇಂದು ಬೆಂಗಳೂರಿಗೆ ಆಗಮಿಸುತ್ತಿದ್ದು, ಈ ವೇಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವಾಗತಿಸಲು ಬರಲ್ಲ ಎಂಬ ಸುದ್ಧಿ ಕೇಳಿಬರುತ್ತಿದೆ.
ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿ ಜೈಲು ಪಾಲಾಗಿದ್ದ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ದೆಹಲಿ ಹೈಕೋರ್ಟ್ ನ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದು, ಇಂದು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಅವರನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅದ್ದೂರಿ ಮೆರವಣಿಗೆ ಮೂಲಕ ಬರಮಾಡಿಕೊಳ್ಳುತ್ತಿದ್ದು, ಇದಕ್ಕಾಗಿ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ಭಾರಿ ತಯಾರಿ ನಡೆಸಿದ್ದಾರೆ.

ಕೆಪಿಸಿಸಿ ವತಿಯಿಂದ ಈ ಸ್ವಾಗತ ಕೋರಲಾಗುತ್ತಿದೆ ಎಂದು ಹೇಳಲಾಗಿದೆ. ಆದರೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಸ್ವಾಗತ ಸಮಾರಂಭದಿಂದ ದೂರ ಉಳಿಯುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ಪ್ರವಾಹ ಪೀಡಿತ ಪ್ರದೇಶಗಳ ಪ್ರವಾಸಕ್ಕೆ ತೆರಳಲಿರುವ ಸಿದ್ದರಾಮಯ್ಯ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಪಕ್ಷದ ನಾಯಕರು ಡಿ.ಕೆ. ಶಿವಕುಮಾರ್ ಅವರನ್ನು ಸ್ವಾಗತಿಸಲಿದ್ದಾರೆ ಎಂದು ಹೇಳಿದ್ದಾರೆ. ಹೀಗೆ ಡಿಕೆಶಿ ಸ್ವಾಗತ ಕಾರ್ಯಕ್ರಮದಿಂದ ಸಂಪೂರ್ಣ ಅಂತರ ಕಾಯ್ದುಕೊಳ್ಳಲು ಸಿದ್ದರಾಮಯ್ಯ ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








