60ಕ್ಕೂ ಹೆಚ್ಚು ಬಾಂಗ್ಲಾ ಪ್ರಜೆಗಳ ಬಂಧನ..!

ಬೆಂಗಳೂರು

    ನಗರದಲ್ಲಿ ಉಗ್ರಗಾಮಿ ಅಡಗುತಾಣಗಳ ಎಚ್ಚರಿಕೆ ಹಾಗೂ ಮಾದಕ ವಸ್ತು ಜಾಲ ಇನ್ನಿತರ ಕಾನೂನುಬಾಹಿರ ಕೃತ್ಯಗಳ ಹಿನ್ನೆಲೆಯಲ್ಲಿ ವಿದೇಶಿ ಪ್ರಜೆಗಳ ಮೇಲೆ ನಿಗಾವಹಿಸಿರುವ ನಗರದ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಅಕ್ರಮವಾಗಿ ನಗರದಲ್ಲಿ ವಾಸಿಸುತ್ತಿದ್ದ 60ಕ್ಕೂ ಹೆಚ್ಚು ಮಂದಿ ಬಾಂಗ್ಲಾ ದೇಶದ ಪ್ರಜೆಗಳನ್ನು ಬಂಧಿಸಿದ್ದಾರೆ.

        ನಗರದ ಮಾರತ್‌ಹಳ್ಳಿ, ರಾಮಮೂರ್ತಿ ನಗರ, ಕೆಆರ್ ಪುರ, ಹೆಚ್.ಎ.ಎಲ್ ಇನ್ನಿತರ ಕಡೆಗಳಲ್ಲಿ ಅಕ್ರಮವಾಗಿ ನೆಲೆಸಿರುವವರ ಮಾಹಿತಿ ಸಂಗ್ರಹಿಸಿ ನಿನ್ನೆ ರಾತ್ರಿಯಿಂದ ಕಾರ್ಯಾಚರಣೆ ನಡೆಸಿ, 60ಕ್ಕೂ ಹೆಚ್ಚು ಬಾಂಗ್ಲಾ ದೇಶದ ಪ್ರಜೆಗಳನ್ನು ಬಂಧಿಸಿ ಅವರನ್ನು ಸ್ವದೇಶಕ್ಕೆ ವಾಪಾಸು ಕಳುಹಿಸುವ ಡಿ ಫೋರ್ಟ್ ಪ್ರಕ್ರಿಯೆ ನಡೆಸಲಾಗಿದೆ.

      ಬಂಧಿಸಿರುವ ಬಾಂಗ್ಲಾ ದೇಶದ ಪ್ರಜೆಗಳಲ್ಲಿ 29 ಪುರುಷರು, 22 ಮಂದಿ ಮಹಿಳೆಯರು, 9 ಮಂದಿ ಯುವತಿಯರು ಸೇರಿ 60 ಮಂದಿ ಅಕ್ರಮ ವಲಸಿಗರಿದ್ದು ಹಲವು ವರ್ಷಗಳಿಂದ ಇವರೆಲ್ಲರೂ ಅಕ್ರಮವಾಗಿ ನೆಲೆಸಿರುವುದು ದಾಳಿಯಲ್ಲಿ ಕಂಡುಬಂದಿದೆ ಎಂದು ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಅವರು ತಿಳಿಸಿದ್ದಾರೆ.
 

     ಬಂಧಿಸಿರುವ ಬಾಂಗ್ಲಾ ಪ್ರಜೆಗಳ ವಿರುದ್ಧ ವಿದೇಶಿ ಕಾಯ್ದೆಯಡಿ ಪ್ರಕರಣ ದಾಖಲಿಸಿ ಅವರ ಪಾಸ್‌ಪೋರ್ಟ್ ಪರಿಶೀಲಿಸಲಾಗುತ್ತಿದೆ. ಹಲವು ವರ್ಷಗಳಿಂದ ಇಲ್ಲೇ ನೆಲೆಸಿರುವ ಬಾಂಗ್ಲಾ ದೇಶಿಗರು ಅಕ್ರಮವಾಗಿ ಆಧಾರ್‌ಕಾರ್ಡ್. ಇನ್ನಿತರ ಸರ್ಕಾರಿ ದಾಖಲೆಗಳನ್ನು ಪಡೆಯಲಿದ್ದು, ಅವುಗಳ ಪರಿಶೀಲನೆ ನಡೆಸಲಾಗಿದೆ ಎಂದರು.

     ಹಲವು ವರ್ಷಗಳ ಹಿಂದೆ ನಗರಕ್ಕೆ ಬಂದಿರುವ ಬಾಂಗ್ಲಾ ದೇಶಿಗರಲ್ಲಿ ಬಹುತೇಕ ಮಂದಿ ಕೂಲಿ ಕೆಲಸ ಮಾಡಿಕೊಂಡಿದ್ದಾರೆ. ಸ್ಥಳೀಯವಾಗಿಯೇ ಸಂಬಂಧ ಬೆಳೆಸಿಕೊಂಡು ಸರ್ಕಾರ ಸವಲತ್ತುಗಳನ್ನು ಪಡೆಯುತ್ತಿರುವುದು ತನಿಖೆಯಲ್ಲಿ ಕಂಡು ಬಂದಿದೆ ಎಂದು ಹೇಳಿದರು.
ಬಂಧಿಸಿರುವ ಬಾಂಗ್ಲಾ ದೇಶದ ಪ್ರಜೆಗಳು ಎಷ್ಟು ವರ್ಷಗಳಿಂದ ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದಾರೆ. ಅವರ ವೀಸಾ ಅವಧಿ ಎಷ್ಟು ವರ್ಷವಿತ್ತು? ಯಾವ ಉದ್ದೇಶಕ್ಕಾಗಿ ಬಂದಿದ್ದರು ಹಾಗೂ ವೀಸಾ ಪಡೆದಿದ್ದರು ಎಂಬುದರ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದರು.

ಆಧಾರ್ ಕಾರ್ಡ್ ಪತ್ತೆ

      ನಗರದಲ್ಲಿ ಅಕ್ರಮವಾಗಿ ವಿದೇಶಿಗರು ನೆಲೆಸಿರುವ ಬಗ್ಗೆ ದೂರುಗಳು ಬರುತ್ತಿದ್ದವು. ಇತ್ತೀಚೆಗೆ ಕೇಂದ್ರ ಗುಪ್ತಚರ ಇಲಾಖೆ, ಅಕ್ರಮ ವಿದೇಶಿ ವಲಸಿಗರ ಬಗ್ಗೆ ನಿಗಾವಹಿಸಿ ಅವರ ಚಟುವಟಿಕೆಗಳ ಬಗ್ಗೆ ಕಣ್ಣಿಡುವಂತೆ ಎಚ್ಚರಿಕೆ ನೀಡಿತ್ತು. ಈ ಬೆನ್ನಲ್ಲೆ ದಾಳಿ ನಡೆಸಿ ಅಕ್ರಮವಾಗಿ ನೆಲೆಸಿದ ಬಾಂಗ್ಲಾದೇಶಿಗರನ್ನು ಬಂಧಿಸಲಾಗಿದೆ ಎಂದರು.
ಕೆಆರ್ ಪುರ, ಮಾರತ್‌ಹಳ್ಳಿ ಅಲ್ಲದೆ ಬಾಗಲೂರು, ಇನ್ನಿತರ ಹೊರ ವಲಯದ ಪ್ರದೇಶಗಳಲ್ಲಿ ಅಕ್ರಮವಾಗಿ ವಿದೇಶಿಗರು ನೆಲೆಸಿರುವ ಮಾಹಿತಿ ಇದ್ದು, ನಿರಂತರ ದಾಳಿ ನಡೆಸಲಾಗುವುದು. ನಗರದಲ್ಲಿರುವ ಎಲ್ಲ ವಿದೇಶಿಗರ ಪಾಸ್‌ಪೋರ್ಟ್-ವೀಸಾವನ್ನು ವಲಸೆ ಅಧಿಕಾರಿಗಳ ಸಹಕಾರದೊಂದಿಗೆ ಪರಿಶೀಲಿಸಿ ಪತ್ತೆ ಕಾರ್ಯ ಕೈಗೊಳ್ಳಲಾಗುವುದು ಅಕ್ರಮ ವಾಸಿಗಳನ್ನು ಪತ್ತೆ ಹಚ್ಚಿ ಅವರನ್ನು ಗಡಿಪಾರು ಮಾಡಲಾಗುವುದು ಎಂದು ಸಂದೀಪ್ ಪಾಟೀಲ್ ತಿಳಿಸಿದರು.

ಆಫ್ರಿಕನ್ನರ ಸೆರೆ

      ವಿದ್ಯಾರ್ಥಿ ಹಾಗೂ ಪ್ರವಾಸಿ ವೀಸಾದಡಿ ನಗರಕ್ಕೆ ಬಂದು ವೀಸಾ ಅವಧಿ ಮುಗಿದಿದ್ದರೂ ಅಕ್ರಮವಾಗಿ ನೆಲೆಸಿದ್ದ 7 ಆಫ್ರಿಕ ದೇಶದ ಪ್ರಜೆಗಳನ್ನು ಪತ್ತೆ ಹಚ್ಚಿ ಲಾಗುತ್ತದೆ ಆಫ್ರಿಕಾ ದೇಶಗಳಿಂದ ನಗರಕ್ಕೆ ಬಂದು ಪೊಲೀಸರ ಕಣ್ತಪ್ಪಿಸಿ ಇಲ್ಲೇ ವಾಸವಿರುವವರ ಮಾಹಿತಿ ಕಲೆಹಾಕಿ ಅವರನ್ನು ಸ್ವದೇಶಕ್ಕೆ ಕಳುಹಿಸುವ ಪ್ರಕ್ರಿಯೆ ಆರಂಭಿಸಲಾಗಿದೆ ಎಂದರು.ಇತ್ತೀಚೆಗಷ್ಟೇ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಆರಂಭಿಸುವುದಾಗಿ ಘೋಷಿಸಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link