ಗದಗ:
ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಇಬ್ಬರು ದಾರಣವಾಗಿ ಸಾವನ್ನಪ್ಪಿದ ಘಟನೆ ಜಿಲ್ಲೆ ನರಗುಂದ ತಾಲೂಕಿನ ಚಿಕ್ಕನರಗುಂದ ಗ್ರಾಮದ ಬಳಿ ಭಾನುವಾರ ನಡೆದಿದೆ.
ಶಿವಾನಂದ(18),ಮಲ್ಲಿಕಾರ್ಜುನ (20) ಮೃತ ದುರ್ದೈವಿಗಳು. ಮೃತರಿಬ್ಬರು ಚಿಕ್ಕನರಗುಂದ ಗ್ರಾಮದ ನಿವಾಸಿಗಳು ಎಂದು ತಿಳಿದು ಬಂದಿದೆ. ಟ್ರ್ಯಾಕ್ಟರ್ ಪಲ್ಟಿಯಾಗಿದ್ದರಿಂದ ಇಂಜಿನ್ ಕೆಳಗೆ ಸಿಲುಕಿ ಇಬ್ಬರೂ ಸಾವನ್ನಪ್ಪಿದ್ದಾರೆ.
ದೀಪಾವಳಿ ಹಬ್ಬದಂದೇ ಈ ದುರ್ಘಟನೆ ಸಂಭವಿಸಿದೆ. ಇದರಿಂದ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಇನ್ನು ಈ ಸಂಬಂಧ ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ