ಸಿಎಂ ಭೇಟಿ ಮಾಡಿದ ಕೆಎಫ್ ಸಿಸಿ ನಿಯೋಗ..!

ಬೆಂಗಳೂರು:

     ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ಹಿರಿಯ ಕಲಾವಿದರು ಮತ್ತು ಚಿತ್ರ ನಿರ್ಮಾಪಕರು ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ, ಮಲ್ಟಿಪ್ಲೆಕ್ಸ್ ಗಳಲ್ಲಿ ದಿನದ ಪ್ರಧಾನ ಸಮಯಗಳಲ್ಲಿ ಕನ್ನಡ ಸಿನಿಮಾಗಳ ಪ್ರದರ್ಶನ ಮಾಡಲು ಆದೇಶ ನೀಡುವಂತೆ ಮನವಿ ಸಲ್ಲಿಸಿದರು.ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಡಿಆರ್ ಜಯರಾಜ್, ಮಾಜಿ ಅಧ್ಯಕ್ಷ ಚಿನ್ನೇಗೌಡ, ನಟ ದೊಡ್ಡಣ್ಣ, ನಿರ್ದೇಶಕ ರಾಕ್ ಲೈನ್ ವೆಂಕಟೇಶ್ ಮತ್ತು ಇತರ ಕಲಾವಿದರು ನಿಯೋಗದಲ್ಲಿದ್ದರು ಎಂದು ತಿಳಿದು ಬಂದಿದೆ.

   ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿದ ಚಿನ್ನೇಗೌಡ, ಮುಖ್ಯಮಂತ್ರಿಗಳೊಂದಿಗೆ ಸುಮಾರು 1 ಗಂಟೆ ಮಾತುಕತೆ ನಡೆಸಿದ್ದು ನಮ್ಮ ಬೇಡಿಕೆಗಳು ಮತ್ತು ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿ ಆಲಿಸಿದ್ದಾರೆ. ಈಗ ಮಲ್ಟಿಪ್ಲೆಕ್ಸ್ ಗಳಲ್ಲಿ ಪ್ರಮುಖ ಸಮಯಗಳನ್ನು ಕನ್ನಡೇತರ ಚಿತ್ರಗಳಿಗೆ ನೀಡುತ್ತಿದ್ದಾರೆ. ಬೇರೆಲ್ಲಾ ರಾಜ್ಯಗಳಲ್ಲಿ ಆಯಾ ಸ್ಥಳೀಯ ಭಾಷೆಗಳ ಚಿತ್ರಗಳಿಗೆ ನೀಡಲಾಗುತ್ತಿದೆ. ಇದೇ ರೀತಿ ನಮ್ಮ ರಾಜ್ಯದಲ್ಲಿ ಕೂಡ ಬರಬೇಕು ಎಂದರು.

   ಸಭೆಯಲ್ಲಿ ಫಿಲ್ಮ್ ಸಿಟಿ ನಿರ್ಮಾಣಕ್ಕೆ ಸ್ಥಳದ ಬಗ್ಗೆ ಕೂಡ ಚರ್ಚೆ ನಡೆಸಲಾಯಿತು. ಫಿಲ್ಮ್ ಸಿಟಿ ನಿರ್ಮಾಣದ ಬಗ್ಗೆ ಹಿಂದಿನ ಮುಖ್ಯಮಂತ್ರಿಗಳಲ್ಲಿ ಮೈಸೂರು, ರಾಮನಗರ ಎಂಬ ಗೊಂದಲಗಳಿದ್ದವು. ಈಗಿನ ಸಿಎಂ ಯಡಿಯೂರಪ್ಪ ಕನಕಪುರ ರಸ್ತೆಯಲ್ಲಿ ಎಂದು ಹೇಳುತ್ತಿದ್ದಾರೆ. ನಾವು ಮೈಸೂರಲ್ಲಿ ಮಾಡಿ ಎಂದು ಕೇಳುತ್ತಿದ್ದೇವೆ. ಅದನ್ನು ತಮ್ಮ ಅಧಿಕಾರಿಗಳ ಜೊತೆ ಚರ್ಚಿಸಿ ತೀರ್ಮಾನಿಸುತ್ತೇವೆ ಎಂದು ಸಿಎಂ ಹೇಳಿದ್ದಾರೆ ಎಂದರು.

      ಇದೇ ವೇಳೆ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರು, ಚಿತ್ರ ನಿರ್ದೇಶಕರು, ನಿರ್ಮಾಪಕರು ಹಾಗೂ ಇತರರಿಗೆ ಮನೆ ಒದಗಿಸಿಕೊಡುವಂತೆ ಕೇಳಿದ್ದಾರೆ. ಬಿಡಿಎ ಫ್ಲಾಟ್ ಗಳನ್ನು ಕೈಗೆಟಕುವ ದರದಲ್ಲಿ ನೀಡಬಹುದು ಎಂದಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link