ಶ್ರೀನಗರ:
ಜಮ್ಮು ಮತ್ತು ಕಾಶ್ಮೀರದ ಮಚಿಲ್ ಭಾಗದಲ್ಲಿನ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ(LOC) ಯಲ್ಲಿ ಪಾಕಿಸ್ತಾನ ಸೈನ್ಯ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದ ಪರಿಣಾಮ ಒಬ್ಬರು ಮೃತಪಟ್ಟಿದ್ದಾರೆ.
ಬುಧವಾರ ಬೆಳಿಗ್ಗೆ ಈ ಅಪ್ರಚೋದಿತ ಗುಂಡಿನ ದಾಳಿ ನಡೆದಿರುವ ಕುರಿತಾಗಿ ಮಾಹಿತಿ ಲಭ್ಯವಾಗಿದೆ. ಘಟನೆಯಲ್ಲಿ ಇನ್ನೂ ಏಳು ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿನ್ನೆ ರಾತ್ರಿಯಿಂದ ಅಲ್ಲಿ ಗುಂಡಿನ ದಾಳಿ ನಡೆಯುತ್ತಿದ್ದು ಇದಕ್ಕೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ