ರಾಮನಗರ
“ನಾನು ಜೆಡಿಎಸ್ ಪಕ್ಷ ತೊರೆಯಲು ತೀರ್ಮಾನಿಸಿದ್ದೇನೆ. ಮುಂದಿನ ದಿನಗಳಲ್ಲಿ ಈ ವಿಷಯವಾಗಿ ಅಧಿಕೃತವಾಗಿ ತಿಳಿಸುತ್ತೇನೆ ” ಎಂದು ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಹೇಳಿದರು.ಜೆಡಿಎಸ್ನ ಬಹುತೇಕ ವಿಧಾನ ಪರಿಷತ್ ಸದಸ್ಯರು ಇದೇ ತೀರ್ಮಾನಕ್ಕೆ ಬಂದಿದ್ದು. ಈಗಲೇ ನಾನು ಎಲ್ಲವನ್ನು ಹೇಳಲು ಆಗುವುದಿಲ್ಲ.
ಮುಂದಿನ ದಿನಗಳಲ್ಲಿ ಎಲ್ಲವನ್ನು ಸ್ಪಷ್ಟಪಡಿಸುತ್ತೇನೆ” ಎಂದು ತಿಳಿಸಿದ್ದಾರೆ.ಇನ್ನೂ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ ಪುಟ್ಟಣ್ಣ, “ಕೆಲವರಿಗೆ ಯಾರಿಗೆ ನೋವಾದರೂ, ಯಾರು ಸತ್ತರೂ ಏನು ಅನ್ನಿಸಲ್ಲ” ಎಂದು ಕಿಡಿಕಾರಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ