ಬೆಂಗಳೂರು:
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರ ರಾಜಕೀಯ ಸಲಹೆ ಗಾರರಾಗಿ ಹಿರಿಯ ಪತ್ರಕರ್ತ ಎಂ.ಬಿ. ಮರಮಕಲ್ ಅವರನ್ನು ನೇಮಕ ಮಾಡಿದ್ದು, ಸಚಿವ ಸಂಪುಟ ದರ್ಜೆ ಸ್ಥಾನ ನೀಡಲಾಗಿದೆ.
ಸದಾ ಸಿಎಂ ಬಿಎಸ್ವೈ ಜೊತೆಯಲ್ಲಿಯೇ ಇರುತ್ತಿದ್ದ ಮರಮಕಲ್ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಅನ್ವಯವಾಗುವಂತೆ ಸಂಪುಟ ದರ್ಜೆಯ ಸ್ಥಾನಮಾನ ನೀಡಿ ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರನ್ನಾಗಿ ನೇಮಿಸಿ ಸಿಬ್ಬಂದಿ ಮತ್ತು ಆಡಳಿತ ನಿರ್ವಹಣೆ ಇಲಾಖೆ ಅಧೀನ ಕಾರ್ಯದರ್ಶಿ ಆರ್.ಎಸ್.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
