ಕನ್ನಡ ಕೇವಲ ನವೆಂಬರ್ 1ಕ್ಕೆ ಸೀಮಿತವಾಗಬಾರದು : ಶಾಸಕಿ

ಹಿರಿಯೂರು :

   ರಾಷ್ಟ್ರೀಯ ಹಬ್ಬಗಳ ಅಚರಣಾ ಸಮಿತಿಯ ವತಿಯಿಂದ ತಾಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ 64ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಚಾಲನೆ ನೀಡಿ ಕನ್ನಡ ಭಾಷೆಗೆ ಮೊದಲ ಆದ್ಯತೆ ನೀಡಬೇಕು ಎಂದರು. ನಮ್ಮ ಭಾಷೆಯ ಬಗ್ಗೆ ಕನ್ನಡ ನಾಡಿನ ಬಗ್ಗೆ ನಮ್ಮ ಪರಿಸರ ಅಭಿವೃದ್ಧಿ ಹೊಂದಬೇಕು ಕನ್ನಡ ಭಾಷೆಯನ್ನು ಉಳಿಸಬೇಕು ಕನ್ನಡ ನಾಡು-ನುಡಿಗೆ ಮೊದಲ ಆದ್ಯತೆ ನೀಡುವುದರ ಮೂಲಕ ಕನ್ನಡ ಕೇವಲ ನವೆಂಬರ್ 1ಕ್ಕೆ ಸೀಮಿತವಾಗಬಾರದು ಎಂದರು.

   ಹಿರಿಯೂರು ಯಾವಾಗಲೂ ಬರಪೀಡಿತ ಪಟ್ಟಿ ಯಲ್ಲಿ ಇರುತ್ತಿತ್ತು ವರುಣನ ಕೃಪೆಯಿಂದ ತಾಲ್ಲೂಕಿನಲ್ಲಿ ಉತ್ತಮ ಮಳೆಯಾಗಿದೆ ಮೈಸೂರು ಅರಸರ ಅಡಳಿತದಲ್ಲಿ. ತಾಲ್ಲೂಕಿನಲ್ಲಿ ವಾಣಿವಿಲಾಸ ಸಾಗರ ಅಣೆಕಟ್ಟು ನಿರ್ಮಾಣ ಮಾಡಿ ಕುಡಿಯುವ ನೀರಿಗೆ ಅಸರೆ ಮಾಡಿಕೊಟ್ಟಿದ್ದಾರೆ ಎಂದರು

   ತಾಲೂಕು ಕ್ರೀಡಾಂಗಣದ ಅಭಿವೃದ್ಧಿಗೆ 50 ಲಕ್ಷ ಅನುದಾನ ನೀಡಲಾಗಿದೆ ಮುಂದಿನ ಗಣರಾಜ್ಯೋತ್ಸವ ದವತ್ತಿಗೆ ತಾಲ್ಲೂಕು ಕ್ರೀಡಾಂಣ ಅಭಿವೃದ್ಧಿ ಮಾಡಲಾಗುವುದು ಎಂದು ಹೇಳಿದರು.64ನೇ ಕನ್ನಡ ರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದ ತಹಶಿಲ್ದಾರ್ ಜಿ.ಹೆಚ್. ಸತ್ಯನಾರಾಯಣ ಮಾತನಾಡಿ ಕನ್ನಡ ರಾಜ್ಯೋತ್ಸವ ಪ್ರತಿವರ್ಷ ನವಂಬರ್ 1ರಂದು ಆಚರಿಸಲಾಗುತ್ತದೆ ಅತ್ಯಂತ ಪ್ರಾಚೀನ ಕಾಲದಲ್ಲಿ ಕರ್ನಾಟಕ ಎಂಬ ಹೆಸರಿತ್ತು.

    ಬ್ರಿಟಿಷ್ ಆಡಳಿತಕ್ಕೆ ಒಳಪಟ್ಟು ಮೈಸೂರು ಸಂಸ್ಥಾನವಾಗಿ ಮಾರ್ಪಟ್ಟಿತು ಮೈಸೂರು ರಾಜ್ಯವು ಈಗಿನ ಕರ್ನಾಟಕ 1956 ನವೆಂಬರ್ 1ರಂದು ನಿರ್ಮಾಣವಾದುದರ ಸಂಕೇತವಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ.ಕನ್ನಡದ ಕುಲಪುರೋಹಿತರಾದ ಆಲೂರು ವೆಂಕಟರಾವ್ ಕರ್ನಾಟಕ ಏಕೀಕರಣ ಚಳುವಳಿಯನ್ನು ಪ್ರಾರಂಭಿಸಿದರು 1950 ನಂತರ ಭಾರತದ ವಿವಿಧ ಭಾಷೆಗಳ ಆಧಾರದ ಮೇಲೆ ರಾಜ್ಯಗಳಾಗಿ ರೂಪುಗೊಂಡವು ಈ ಹಿಂದೆ ರಾಜರ ಆಳ್ವಿಕೆಯಲ್ಲಿ ದಕ್ಷಿಣ ಭಾರತದಲ್ಲಿ ಹಲವಾರು ಸಂಸ್ಥಾನಗಳು ಒಳಗೊಂಡಂತೆ ರಾಜ್ಯಗಳು ರೂಪುಗೊಂಡಿದ್ದವು ಕನ್ನಡ ಮಾತನಾಡುವ ಪ್ರಾಂತ್ಯಗಳು ಸೇರಿ ಮೈಸೂರು ರಾಜ್ಯ ಉದಯವಾಯಿತು.

      ಸ್ವತಂತ್ರ ನಂತರದಲ್ಲಿ ಡಿ ದೇವರಾಜ ಅರಸು ಅವರ ಕಾಲದಲ್ಲಿ 1973 ನವಂಬರ್ 1ರಂದು ಕರ್ನಾಟಕ ಎಂದು ನಾಮಕರಣವಾಯಿತು ಹಿಂದೆ ಏಕೀಕರಣ ಚಳುವಳಿಗಳು ನಡೆದು ಅನೇಕ ಗಣ್ಯರು ತ್ಯಾಗ ಬಲಿದಾನ ಮಾಡಿದ್ದಾರೆ. ಕನ್ನಡ ರಾಜ್ಯೋತ್ಸವವನ್ನು ಕರ್ನಾಟಕದಲ್ಲಿರುವ ಹಿಂದೂಗಳು ಮುಸ್ಲಿಮರು ಕ್ರಿಶ್ಚಿಯನ್ನರು ಜೈನರು ಬೌದ್ಧರು ಸಿಖ್ಖರು ಹಾಗೂ ಪರ್ಷಿಯನ್ನರು ಧರ್ಮ ಭೇದವಿಲ್ಲದೆ ಆಚರಿಸುತ್ತೇವೆ ಹಾಗೂ ಸರ್ಕಾರ ಮೆರವಣಿಗೆಗೆ ಆಟೋರಿಕ್ಷಾಗಳು ವಾಹನಗಳು ಕನ್ನಡದ ಬಣ್ಣಗಳ ಕೆಂಪು ಮತ್ತು ಹಳದಿ ಬಣ್ಣಗಳ ಬಾವುಟಗಳು ಅಲಂಕರಿಸಲಾಗುತ್ತದೆ ಎಂದರು

    ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯವಾಗಿ ಸೇವೆ ಸಲ್ಲಿಸಿದ ಸಾಧಕರಿಗೆ ಸನ್ಮಾನ ಮಾಡಿ ಪ್ರಶಸ್ತಿ ನೀಡಿ ಗೌರವಿಸಲಾಯಿತು ಹಿರಿಯೂರು ನಗರದ ವಿವಿಧ ಶಾಲೆಗಳಿಂದ ಆಗಮಿಸಿದ್ದ ಮಕ್ಕಳು ನಾಡಿಗಾಗಿ ತ್ಯಾಗ ಬಲಿದಾನ ಮಾಡಿದ ವೀರರ ನೃತ್ಯ ರೂಪಗಳೊಂದಿಗೆ ಕಾರ್ಯಕ್ರಮವನ್ನು ನಡೆಸಿಕೊಟ್ಟರು.ಈ ಕಾರ್ಯಕ್ರಮದಲ್ಲಿ ಎಲ್ಲಾ ಪಕ್ಷದ ಮುಖಂಡರು ವಿವಿಧ ಸಂಘಟನೆಗಳು ಕನ್ನಡಪರ ಸಂಘಟನೆಗಳು ವಿವಿಧ ಇಲಾಖೆ ಅಧಿಕಾರಿಗಳು ಸೇರಿದಂತೆ ಮತ್ತಿತರು ಭಾಗವಹಿಸಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap