ಸಂವಿಧಾನದ ಮೌಲ್ಯಗಳಿಗೆ ಬೆಲೆ ಕೊಡದ ಸರ್ಕಾರ

ಚಿತ್ರದುರ್ಗ:

     ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಂವಿಧಾನದ ಮೌಲ್ಯಗಳನ್ನು ಗಾಳಿಗೆ ತೂರಿ ಆಡಳಿತ ನಡೆಸುತ್ತಿರುವುದರ ವಿರುದ್ದ ಜನ ಬೀದಿಗಿಳಿದು ಹೋರಾಡಬೇಕಾಗಿದೆ ಎಂದು ಸ್ವರಾಜ್ ಇಂಡಿಯಾ ಪಕ್ಷದ ಜಿಲ್ಲಾಧ್ಯಕ್ಷ ಜೆ.ಯಾದವರೆಡ್ಡಿ ಕೋಮುವಾದಿ ಬಿಜೆಪಿ ವಿರುದ್ದ ಗುಡುಗಿದರು.

    ಪ್ರವಾಸಿ ಮಂದಿರದಲ್ಲಿ ಶನಿವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಪ್ರಜಾಪ್ರಭುತ್ವದ ತಪ್ಪುಗಳನ್ನು ಪ್ರಶ್ನೆ ಮಾಡುವ ಪತ್ರಕರ್ತ ದೊಡ್ಡಿಪಾಳ್ಯ ನರಸಿಂಹಮೂರ್ತಿಯನ್ನು ಬಂಧಿಸಿರುವ ಪೊಲೀಸರು ದಲಿತರು, ಶೋಷಿತರು, ಅಲ್ಪಸಂಖ್ಯಾತರು, ದಮನಿತರ ವಿರುದ್ದ ಆಡಳಿತ ನಡೆಸುತ್ತಿರುವ ಸರ್ಕಾರದ ಕ್ರಮವನ್ನು ಖಂಡಿಸುವವರ ಹಕ್ಕನ್ನು ಮೊಟಕುಗೊಳಿಸುತ್ತಿರುವುದು ಖಂಡನೀಯ ಎಂದರು.

    ಹದಿನೈದು ವರ್ಷಗಳ ಹಿಂದೆ ಸರ್ಕಾರಿ ಕಾರ್ಯಕ್ರಮ ಬಡವರಿಗೆ ತಲುಪುತ್ತಿಲ್ಲ ಎಂದು ಪತ್ರಕರ್ತ ದೊಡ್ಡಿಪಾಳ್ಯ ನರಸಿಂಹಮೂರ್ತಿ ಭಾµÀಣ ಮಾಡಿದ್ದರು ಎನ್ನುವ ಕಾರಣಕ್ಕಾಗಿ ಅವರನ್ನು ಬಂಧಿಸಲಾಗಿದೆ ಎಂದು ರಾಯಚೂರು ಎಸ್ಪಿ ಹೇಳಿರುವುದು ನಿಜಕ್ಕೂ ಹಾಸ್ಯಾಸ್ಪದ. ನೈಸ್ ರಸ್ತೆ ನಿರ್ಮಾಣದಿಂದ ರೈತರಿಗಾದ ಅನ್ಯಾಯದ ವಿರುದ್ದ ದೊಡ್ಡ ಪ್ರಮಾಣದಲ್ಲಿ ಹೋರಾಟ ನಡೆಸಿದ ಪತ್ರಕರ್ತ ದೊಡ್ಡಿಪಾಳ್ಯ ನರಸಿಂಹಮೂರ್ತಿ ಎಲ್ಲಿಯೂ ತಲೆಮರೆಸಿಕೊಂಡಿರಲಿಲ್ಲ. ಹರಿತವಾದ ಲೇಖನ ಅವರದು. ದುರುದ್ದೇಶವಾಗಿಯೇ ಬಿಜೆಪಿ ಸರ್ಕಾರ ಪೊಲೀಸರ ಮೂಲಕ ಅವರ ಹಕ್ಕನ್ನು ಧಮನ ಮಾಡಲು ಹೊರಟಿದೆ. ಮುಂದೆ ಇನ್ನು ಉಸಿರುಗಟ್ಟುವ ಅಪಾಯಕಾರಿ ವಾತಾವರಣ ನಿರ್ಮಾಣವಾದರೂ ಆಗಬಹುದು ಇದರ ವಿರುದ್ದ ರಾಜ್ಯದ ಜನ ಎಚ್ಚೆತ್ತುಕೊಳ್ಳಬೇಕೆಂದು ಮನವಿ ಮಾಡಿದರು.

      ಇಂದಿರಾಗಾಂಧಿ ದೇಶದ ಪ್ರಧಾನಿಯಾಗಿದ್ದಾಗ ತುರ್ತು ಪರಿಸ್ಥಿತಿ ಹೇರಿದ್ದರಿಂದ ಮತದಾರರು ತಕ್ಕ ಪಾಠ ಕಲಿಸಿದ್ದರು ಎನ್ನುವುದನ್ನು ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳು ಮರೆತಂತಿದೆ. ಕಾಂಗ್ರೆಸ್ ಮುಕ್ತ ಭಾರತ ಮಾಡಲು ಹೊರಟಿದ್ದೇವೆ ಎಂದು ಹೇಳಿಕೊಳ್ಳುತ್ತಿರುವ ಬಿಜೆಪಿ ವಿರೋಧ ಪಕ್ಷ ಮುಕ್ತ ಭಾರತ ಮಾಡಲು ಮುಂದಾಗಿರುವುದು ನಿಜಕ್ಕೂ ಪ್ರಜಾಪ್ರಭುತ್ವದ ಕಗ್ಗೊಲೆಯಾಗುತ್ತಿದೆ. ದೇಶ ಆಳುವವರಿಗೆ ಕಾನೂನು ಬಗ್ಗೆ ಗೌರವವಿಲ್ಲ. ತ್ರಿಭಾಷಾ ಸೂತ್ರ ಒಪ್ಪಿಕೊಂಡಿರುವ ಕೇಂದ್ರ ಸರ್ಕಾರ ಬಲವಂತವಾಗಿ ಹಿಂದಿ ಭಾµೆಯನ್ನು ಹೇರಲು ಹೊರಟಿದೆ. ರಾಷ್ಟ್ರೀಯತೆ ಹೆಸರಿನಲ್ಲಿ ಪ್ರಾದೇಶಿಕ ಭಾಷೆಗಳನ್ನು ತುಳಿಯುತ್ತಿದೆ ಎಂದು ಕಿಡಿ ಕಾರಿದರು.

      ಆರ್.ಸಿ.ಇ.ಪಿ. ಒಪ್ಪಂದಕ್ಕೆ ಕೇಂದ್ರ ಸರ್ಕಾರ ಸಹಿ ಹಾಕಿದ್ದೇ ಆದಲ್ಲಿ 90 ವಿವಿಧ ಬಗೆಯ ವಸ್ತುಗಳು ನಮ್ಮ ದೇಶಕ್ಕೆ ಆಮದಾಗಿ ಹೈನುಗಾರಿಕೆ, ದಿನಬಳಕೆ ವಸ್ತುಗಳನ್ನು ಅಗ್ಗದ ದರದಲ್ಲಿ ವಿದೇಶದವರು ಭಾರತಕ್ಕೆ ಬಂದು ಮಾರಾಟ ಮಾಡಿಕೊಳ್ಳಲು ಅವಕಾಶ ಕಲ್ಪಿಸಿದಂತಾಗುತ್ತದೆ. ರೈತ ವಿರೋಧಿ, ಕಾರ್ಮಿಕ ವಿರೋಧಿ, ಜನ ವಿರೋಧಿ ನೀತಿ ಅನುಸರಿಸುತ್ತಿರುವ ಕೇಂದ್ರ ಸರ್ಕಾರ ಮೊದಲು ತಜ್ಞರ ಜೊತೆ ಚರ್ಚಿಸಿ ಪರಾಮರ್ಶಿಸಿ ಮುಂದಿನ ನಿರ್ಧಾರ ಕೈಗೊಳ್ಳಬೇಕು. ಇಲ್ಲವಾದರೆ ಇದೊಂದು ಮರಣ ಶಾಸನವಾಗಿ ಪರಿಣಮಿಸುವುದರಲ್ಲಿ ಅನುಮಾನವಿಲ್ಲವೆಂದರು.

      ಬಿಜೆಪಿ ರಾಜ್ಯ ಮತ್ತು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಾಗಲೆಲ್ಲಾ ಗೊಂದಲ ಸೃಷ್ಟಿಸುವ ಕೆಲಸ ಮಾಡುವುದನ್ನು ಬಿಟ್ಟರೆ ಅಭಿವೃದ್ದಿ ಕಡೆ ಗಮನ ಕೊಡುತ್ತಿಲ್ಲ. ಉತ್ತರ ಕರ್ನಾಟಕದ ನೆರೆ ಸಂತ್ರಸ್ಥರ ಸಮಸ್ಯೆಗಳು ಇನ್ನು ಪರಿಹಾರವಾಗಿಲ್ಲ. ಟಿಪ್ಪು ಜಯಂತಿಯನ್ನು ರದ್ದುಪಡಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈಗ ಪಠ್ಯದಿಂದ ಟಿಪ್ಪುವನ್ನು ತೆಗೆಯಲು ಹೊರಟಿರುವುದು ನಿಜಕ್ಕೂ ಅಮಾನವೀಯವಾದುದು. ಟಿಪ್ಪು ಒಬ್ಬ ಮುಸಲ್ಮಾನ ಎನ್ನುವ ಕಾರಣಕ್ಕಾಗಿಯೇ ಇಂತಹ ಕೀಳು ಮಟ್ಟದ ಕೆಲಸಕ್ಕೆ ಕೈಹಾಕುವುದು ಸರಿಯಲ್ಲ. ಇತಿಹಾಸ ತಿರುಚುವುದು, ಮರು ಸ್ಥಾಪನೆ ಮಾಡುವುದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ. ಎಲ್ಲಾ ಪಕ್ಷದ ರಾಜಕಾರಣಿಗಳು ಆಯಾ ಜಾತಿಯ ಜಯಂತಿಗಳನ್ನು ಸರ್ಕಾರದ ವತಿಯಿಂದ ಆಚರಿಸುತ್ತಿರುವುದರ ಹಿಂದೆ ಓಟ್ ಬ್ಯಾಂಕ್ ರಾಜಕಾರಣ ಅಡಗಿದೆ. ಹಾಗಾಗಿ ಟಿಪ್ಪು ಜಯಂತಿ ರದ್ದು ಮಾಡಿದಂತೆ ಎಲ್ಲಾ ಜಯಂತಿಗಳನ್ನು ರದ್ದುಪಡಿಸಲಿ ಎಂದು ಸವಾಲು ಹಾಕಿದರು.

     ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ನುಲೇನೂರು ಶಂಕರಪ್ಪ ಮಾತನಾಡಿ ಕೇಂದ್ರ ಸರ್ಕಾರ ಆರ್.ಸಿ.ಇ.ಪಿ.ಒಪ್ಪಂದಕ್ಕೆ ಸಹಿ ಹಾಕಲು ಹೊರಟಿರುವುದು ನಿಜವಾಗಿಯೂ ಗ್ಯಾಟ್‌ಗಿಂತ ಅಪಾಯಕಾರಿ. ಆದ್ದರಿಂದ ಹೈನುಗಾರಿಕೆ ಮತ್ತು ಕೃಷಿಯನ್ನು ಈ ಒಪ್ಪಂದದಿAದ ಹೊರಗಿಟ್ಟು ಪ್ರಧಾನಿ ಮೋದಿ ಸಹಿ ಹಾಕಿಕೊಳ್ಳಲಿ ಎಂದು ಒತ್ತಾಯಿಸಿದರು.ರುದ್ರಸ್ವಾಮಿ, ಕಸಾಪ ಜಿಲ್ಲಾಧ್ಯಕ್ಷ ಡಾ.ದೊಡ್ಡಮಲ್ಲಯ್ಯ, ರೈತ ಮುಖಂಡ ಬಸ್ತಿಹಳ್ಳಿ ಸುರೇಶ್‌ಬಾಬು, ಕಾಂತರಾಜ್ ಪತ್ರಿಕಾಗೋಷ್ಟಿಯಲ್ಲಿ ಉಪಸ್ಥಿತರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap