ಕೋಲಾರ :
ಟಾಲಿವುಡ್ ಪವರ್ ಸ್ಟಾರ್ ಪವನ್ ಕಲ್ಯಾಣ್ ಕೋಲಾರ ಜಿಲ್ಲೆಗೆ ಆಗಮಿಸಿದ್ದಾರೆ.
ಜಿಲ್ಲೆಯ ಶ್ರೀನಿವಾಸಪುರ ಗೌನಿಪಲ್ಲಿ ಗ್ರಾಮದ ಶ್ರೀವೇಣುಗೋಪಾಲಸ್ವಾಮಿ ದೇವಸ್ಥಾನದ ಜಿರ್ಣೋದ್ಧಾರ ಹಾಗೂ ವಿಮಾನ ಗೋಪುರ ಮಹಾಕುಂಬಾಭಿಷೇಕ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲು ಅವರು ಆಗಮಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿ ನಿವೃತ್ತ ನ್ಯಾಯಮೂರ್ತಿ ಗೋಪಾಲಗೋಡ ಶ್ರೀ ನಂಜಾವದೂತ ಮಹಾಸ್ವಾಮೀಜಿ, ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗೆಡೆ, ಮಾಜಿ ವಿಧಾನಸಭಾ ಅಧ್ಯಕ್ಷರು ಕೆ.ಆರ್. ರಮೇಶ್ ಕುಮಾರ್ ಪಾಲ್ಗೊಂಡಿದ್ದಾರೆ.
ಇನ್ನು ನಟ ಪವನ್ ಕಲ್ಯಾಣ್ ಅವರನ್ನು ನೋಡಲು ಸಾವಿರಾರು ಅಭಿಮಾನಿಗಳು ನೂಕು ನುಗ್ಗಲು ಮಾಡಿದ್ದಾರೆ. ಈ ವೇಳೆ ಜನರ ನೂಕು ನುಗ್ಗಲು ನೋಡಿ ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ