ಲಕ್ನೋ:
ದೇಶದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಅಯೋಧ್ಯೆ ಪ್ರಕರಣದ ತೀರ್ಪು ಬರುವವರೆಗೆ ಮತ್ತು ನಂತರದಲಲ್ಲೂ ಯಾರೊಬ್ಬರೂ ಎಲ್ಲೂ ವಿವಾದಾತ್ಮಕ ಹೇಳಿಕೆಗಳನ್ನು ನೀಡಬಾರದು ಎಂದು ಯೋಗಿ ಆದಿತ್ಯನಾಥ್ ತಮ್ಮ ಸಚಿವರಿಗೆ ಸೂಚನೆ ನೀಡಿದ್ದಾರೆ.
ಇದರ ಬೆನ್ನಲ್ಲೇ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಮ್ಮ ಸಚಿವರು ಹಾಗೂ ಪಕ್ಷದ ಕಾರ್ಯಕರ್ತರಿಗೆ ಈ ಕಿವಿ ಮಾತು ಹೇಳಿದ್ದಾರೆ. ಯಾವುದೇ ಕಾರಣಕ್ಕೂ ರಾಮ ಜನ್ಮ ಭೂಮಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಕೂಡದು ಎಂದು ತಾಕೀತು ಮಾಡಿದ್ದಾರೆ ಎನ್ನಲಾಗಿದೆ.
ಅನಗತ್ಯವಾಗಿ ಪ್ರತಿಕ್ರಿಯಿಸದಂತೆ ಮುಖ್ಯಮಂತ್ರಿ ನಮಗೆ ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ.ತೀರ್ಪು ಯಾರ ಪರವಾಗಿ ಬಂದರೂ ಯಾವುದೇ ಸಚಿವರು ವಿವಾದತ್ಮಕ ಹೇಳಿಕೆ ನೀಡಬಾರದು. ಈ ಕುರಿತು ಬಿಜೆಪಿ ದೊಡ್ಡ ಕಾರ್ಯಕ್ರಮದ ಮೂಲಕ ನಿರ್ದೇಶನ ನೀಡಿದೆ ಎಂದು ತಿಳಿದು ಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ