ಪಿಯು ಫಲಿತಾಂಶ ತಡಮಾಡಲು ಪಿಯು ಬೋರ್ಡ್ ಚಿಂತನೆ..!

ಬೆಂಗಳೂರು

     ಪ್ರಸಕ್ತ  ವರ್ಷದ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಸ್ವಲ್ಪ ತಡವಾಗಿ ಪ್ರಕಟಿಸಲು ಪಿಯುಸಿ ಬೋರ್ಡ್ ಚಿಂತನೆ ನಡೆಸಿದೆ ಎನ್ನಲಾಗಿದೆ. ನೀಟ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡ ನಂತರ, ಪಿಯುಸಿ ಫಲಿತಾಂಶವನ್ನು ಪ್ರಕಟಿಸುವ ಬಗ್ಗೆ ಶಿಕ್ಷಣ ಇಲಾಖೆಯಲ್ಲಿ ಮಾತುಕತೆ ನಡೆದಿದೆ.

    ಇಲಾಖಾ ಕಚೇರಿಯಲ್ಲಿ ಆಯೋಜಿಸಲಾಗಿದ್ದ ‘ಸಂವೇದನಾ ಫೋನ್ ಇನ್’ ಕಾರ್ಯಕ್ರಮದಲ್ಲಿ, ವಿದ್ಯಾರ್ಥಿಗಳ ಮಾನಸಿಕ ಒತ್ತಡ ಕಮ್ಮಿಮಾಡುವ ನಿಟ್ಟಿನಲ್ಲಿ ಚಿಂತನೆ ನಡೆಸುವಂತೆ, ಪೋಷಕರೊಬ್ಬರ ಮನವಿಗೆ, ಸಚಿವ ಸುರೇಶ್ ಕುಮಾರ್ ಮೇಲಿನ ರೀತಿಯಲ್ಲಿ ಸ್ಪಂದಿಸಿದ್ದಾರೆ.

   “ನೀಟ್ ಫಲಿತಾಂಶದ ನಂತರ, ಪಿಯುಸಿ ರಿಸಲ್ಟ್ ಪ್ರಕಟಿಸುವ ವಿಚಾರದಲ್ಲಿ, ಇಲಾಖೆಯ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ, ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು” ಎನ್ನುವ ಭರವಸೆ ಸುರೇಶ್ ಕುಮಾರ್ ಅವರಿಂದ ಬಂದಿದೆ.

    ಕರ್ನಾಟಕದ ಪದವಿ ಪೂರ್ವ ಶಿಕ್ಷಣ ಇಲಾಖೆ 2020ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಯನ್ನು ಈಗಾಗಲೇ ಬಿಡುಗಡೆ ಮಾಡಿದೆ. ಆಕ್ಷೇಪಣೆಗಳಿದ್ದರೆ ಸಲ್ಲಿಕೆ ಮಾಡುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಮಾರ್ಚ್ 4, 2020 ರಿಂದ 19ರ ತನಕ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ. ತಾತ್ಕಾಲಿಕ ವೇಳಾಪಟ್ಟಿಗೆ ಬರುವ ಆಕ್ಷೇಪಣೆಗಳನ್ನು ಸ್ವೀಕರಿಸಿದ ಬಳಿಕ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಇಲಾಖೆ ತಿಳಿಸಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link