ಚಳ್ಳಕೆರೆ
ತಾಲ್ಲೂಕಿನ ತಳಕು ಠಾಣಾ ವ್ಯಾಪ್ತಿಯ ಹಿರೇಹಳ್ಳಿಯ ರುದ್ರಮ್ಮನಹಳ್ಳಿ ಗೇಟ್ ಬಳಿ ಭಾನುವಾರ ರಾತ್ರಿ ಮಣ್ಣು ತುಂಬಿದ ಟಿಪ್ಪರ್, ಬೂದಿ ತುಂಬಿದ್ದ ಲಾರಿ ಮುಖಾಮುಖಿ ಡಿಕ್ಕಿಯಲ್ಲಿ ಎರಡೂ ಲಾರಿಗಳ ಚಾಲಕರು ಸ್ಥಳದಲ್ಲೇ ಮೃತಪಟ್ಟಿದ್ದು ಲಾರಿಯಲ್ಲಿದ್ದ ಮೂವರು ಕೂಲಿಕಾರರಿಗೆ ರಕ್ತಗಾಯಗಳಾಗಿ ಇಲ್ಲಿನ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಭೀಕರ ಅಪಘಾತದಲ್ಲಿ ಲಾರಿ ಚಾಲಕ ಮಧ್ಯಪ್ರದೇಶದ ಸುರೇಂದ್ರ ಡಾಕಡ್ ಮತ್ತು ಬೊಮ್ಮಲಿಂನಹಳ್ಳಿಯ ಚಾಲಕ ಶಿವರಾಜ್ ಸ್ಥಳದಲ್ಲೇ ಮೃತಪಟ್ಟಿರುತ್ತಾರೆ. ಅದೇ ಗ್ರಾಮದ ಪ್ರಕಾಶ್, ತಿಪ್ಫೇಶ್, ಆಂಜನೇಯ, ತಿಪ್ಪೇಸ್ವಾಮಿ ಎಂಬುವವರು ಗಾಯಗೊಂಡು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ಧಾರೆ. ತಳಕು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








