ತುಮಕೂರು:
ಹಾಗಲವಾಡಿ ಕೆರೆಗೆ ನೀರು ಹರಿಸದ್ದಕ್ಕೆ ಸಾರ್ವಜನಿಕರು ಆಕ್ರೋಶಗೊಂಡಿದ್ದು, ಶಾಸಕ ಎಸ್.ಆರ್ ಶ್ರೀನಿವಾಸ್ ಅವರನ್ನು ತರಾಟೆಗೆ ತೆಗೆದುಕೊಂಡು ಆಕ್ರೋಶ ಹೊರಹಾಕಿದ್ದಾರೆ.
ಹಾಗಲವಾಡಿ ಗ್ರಾಮದ ಕರಿಯಮ್ಮ ದೇವಿ ದೇವಸ್ಥಾನದ ಸಮುದಾಯ ಭವನ ಉದ್ಘಾಟನೆಗೆ ಗುಬ್ಬಿ ಕ್ಷೇತ್ರದ ಜೆಡಿಎಸ್ ಶಾಸಕ ಎಸ್.ಆರ್ ಶ್ರೀನಿವಾಸ್ ಆಗಮಿಸಿದ್ದರು. ಉದ್ಘಾಟನೆ ನೆರವೇರಿಸಿ ವೇದಿಕೆ ಭಾಷಣ ಮಾಡುತ್ತಿರುವ ಸಂದರ್ಭದಲ್ಲಿ ಸಾರ್ವಜನಿಕರು ಕ್ಲಾಸ್ ತೆಗೆದುಕೊಂಡಿದ್ದಾರೆ.
ವೇದಿಕೆಯಿಂದ ಕೆಳಗಿಳಿದರೂ ಸಹ ಗ್ರಾಮಸ್ಥರು ಶಾಸಕರನ್ನು ಬಿಡಲಿಲ್ಲ. ಕೆಳಗಿಳಿದು ಬರುತ್ತಿದ್ದಂತೆ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ಸ್ಥಳದಲ್ಲಿ ತಳ್ಳಾಟ ನಡೆದಿದ್ದು, ಗಲಾಟೆಯಾಗುತ್ತಿದ್ದಂತೆ ಶಾಸಕ ಶ್ರೀನಿವಾಸ್ ಸ್ಥಳದಿಂದ ಕಾಲ್ಕಿತ್ತಿದ್ದಾರೆ.








