ಬೆಂಗಳೂರು ಸಬ್ ಅರ್ಬನ್ ರೈಲ್ವೆ ಯೋಜನೆಗೆ ಹಸಿರು ನಿಶಾನೆ ತೋರಿದ ಕೇಂದ್ರ.!

ಬೆಂಗಳೂರು:

   ರಾಜ್ಯದ ಜನತೆಯ ಮಹತ್ವಾಕಾಂಕ್ಷೆಯ ಬೆಂಗಳೂರು ಸಬ್ ಅರ್ಬನ್ ರೈಲ್ವೆ ಯೋಜನೆಗೆ ಕೊನೆಗೂ ಕೇಂದ್ರ ಸರ್ಕಾರ ಹಸಿರು ನಿಶಾನೆ ದೊರೆತಿದೆ.ನಗರದಲ್ಲಿನ ಸಂಚಾರ ದಟ್ಟಣೆ ನಿಯಂತ್ರಣಕ್ಕಾಗಿ ಅರಂಭಿಸಲಾಗಿರುವ ಈ ರೈಲು ಯೋಜನೆಗೆ ಅನುಮತಿ ನೀಡುವ ಕುರಿತು ನಡೆದ ರೈಲ್ವೆ ಮಂಡಳಿಯ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ .

   ಇದರಿಂದ ಬೆಂಗಳೂರು ಹಾಗೂ ಸುತ್ತಮುತ್ತ ಇರುವ ತುಮಕೂರು, ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ ಮತ್ತಿತರ ನಗರಗಳ ಜನತೆಗೆ ಅನುಕೂಲವಾಗಲಿದೆ.ರಾಜ್ಯ ಸರ್ಕಾರದ ಸಹಭಾಗಿತ್ವಕ್ಕೆ ಸಂಬಂಧಿಸಿದ ಅಂತಿಮ ಹಂತದ ಮಾತುಕತೆಗಾಗಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರೊಂದಿಗೆ ಮಂಡಳಿಯ ಅಧ್ಯಕ್ಷ ವಿನೋದ್‌ಕುಮಾರ್‌ ಯಾದವ್‌ ಅವರು ಮಂಗಳವಾರ ಮತ್ತೊಂದು ಸುತ್ತಿನ ಸಭೆ ನಡೆಸಲಿದ್ದಾರೆ ಎನ್ನಲಾಗಿದೆ.

    ಬೆಂಗಳೂರಿನ ಸಂಚಾರ ದಟ್ಟಣೆಗೆ ಬ್ರೇಕ್ ಹಾಕಲೆಂದು ರೂಪಿಸಿರುವ ಈ ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ರೈಲ್ವೆ ಮಂಡಳಿಯ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು ಬೆಂಗಳೂರು ಹಾಗೂ ಸುತ್ತಮುತ್ತ ಇರುವ ತುಮಕೂರು, ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ ಮತ್ತಿತರ ನಗರಗಳ ಜನತೆಗೆ ಈ ಯೋಜನೆಯಿಂದ ಸಾಕಷ್ಟು ಅನುಕೂಲವಾಗಲಿದೆ.

     ಮೆಟ್ರೋ ಸೌಲಭ್ಯ ಇರುವ ಕಡೆ ಉಪನಗರ ರೈಲು ಯೋಜನೆ ಬೇಡ ಎಂಬ ಷರತ್ತನ್ನು ಸಡಿಲಗೊಳಿಸಬೇಕು ಎಂಬ ರಾಜ್ಯದ ಬೇಡಿಕೆಗೆ ಮಂಡಳಿ ಸಮ್ಮತಿ ಸೂಚಿಸಿದ್ದು, ಯೋಜನೆಯ ಜಾರಿಗಾಗಿ ಸ್ಪೆಷಲ್‌ ಪರ್ಪಸ್‌ ವೆಹಿಕಲ್‌ (ಎಸ್‌ಪಿವಿ) ಸ್ಥಾಪಿಸಲು ಸೂಚನೆ ನೀಡಿದೆ. ಈಗಿರುವ ಕೆಲವು ಹಳೆಯ ರೈಲು ಮಾರ್ಗಗಳನ್ನೇ ಅಭಿವೃದ್ಧಿಪಡಿಸಿ ಈ ಯೋಜನೆಗಾಗಿ ಬಳಸಿಕೊಳ್ಳಲು ಉದ್ದೇಶಿಸಿರುವ ರೈಲ್ವೆ ಇಲಾಖೆ, ಕೆಲವು ಹೊಸ ಮಾರ್ಗಗಳನ್ನೂ ರೂಪಿಸಲು ನಿರ್ಧರಿಸಿದೆ.

   ರಾಜ್ಯ ಸರ್ಕಾರದ ಸಹಭಾಗಿತ್ವಕ್ಕೆ ಸಂಬಂಧಿಸಿದ ಅಂತಿಮ ಹಂತದ ಮಾತುಕತೆಗಾಗಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರೊಂದಿಗೆ ಮಂಡಳಿಯ ಅಧ್ಯಕ್ಷ ವಿನೋದ್‌ಕುಮಾರ್‌ ಯಾದವ್‌ ಅವರು ಮಂಗಳವಾರ ಮತ್ತೊಂದು ಸುತ್ತಿನ ಸಭೆ ನಡೆಸಲಿದ್ದಾರೆ. 30 ಎಲಿವೇಟೆಡ್ ನಿಲ್ದಾಣಗಳು ಹಾಗೂ 51 ನೆಲಮಟ್ಟದ ನಿಲ್ದಾಣಗಳ ನಿರ್ಮಾಣ ಕಾರ್ಯವು ಯೋಜನೆ ಅಡಿ ನಡೆಯಬೇಕಿದೆ. ಕೆಂಗೇರಿ– ವೈಟ್‌ಫೀಲ್ಡ್, ಬೆಂಗಳೂರು ನಗರ ನಿಲ್ದಾಣ– ರಾಜಾನುಕುಂಟೆ, ನೆಲಮಂಗಲ– ಬೈಯಪ್ಪನಹಳ್ಳಿ ಮತ್ತು ಬೊಮ್ಮಸಂದ್ರ– ದೇವನಹಳ್ಳಿಗಳನ್ನು ಸಂಪರ್ಕಿಸುವ ಮಾರ್ಗಗಳಲ್ಲಿ ಒಟ್ಟು 29 ಹೊಸ ನಿಲ್ದಾಣಗಳು ತಲೆ ಎತ್ತಲಿವೆ ಎಂದು ಮಂಡಳಿ ತಿಳಿಸಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link