ಅಯೋಧ್ಯೆ ತೀರ್ಪು ನೀಡಿದ ನ್ಯಾಯಾಧೀಶರಲ್ಲಿ ಒಬ್ಬರು ಕರ್ನಾಟಕದವರು..! 

ಮಂಗಳೂರು

 
     ಅಯೋಧ್ಯೆ ವಿವಾದಕ್ಕೆ ಅಂತ್ಯ ಹಾಡಿರುವ ಸುಪ್ರೀಂಕೋರ್ಟ್, ಐತಿಹಾಸಿಕ ತೀರ್ಪು ನೀಡಿದೆ. ವಿವಾದಿತ ಪ್ರದೇಶದಲ್ಲಿ ಮಂದಿರ ನಿರ್ಮಾಣಕ್ಕೆ ಹಾಗೂ ಮಸೀದಿ ನಿರ್ಮಾಣಕ್ಕೆ  ಪ್ರತ್ಯೇಕ ಜಮೀನು ನೀಡಲು ಉಚ್ಛ ನ್ಯಾಯಾಲಯ ತನ್ನ ತೀರ್ಪಿನಲ್ಲಿ ಆದೇಶಿಸಿದೆ.ಈ ಮಹತ್ವದ ತೀರ್ಪು ನೀಡಿದ ಸುಪ್ರೀಂ ಕೋರ್ಟ್ ನ   ಪಂಚಪೀಠವೂ ಸಿಜೆಐ ಗೋಗೊಯಿ, ಜಸ್ಟೀಸ್ ಎಸ್ ಎ ಬೋಬ್ಡೆ, ಜಸ್ಟೀಸ್ ಡಿವೈ ಚಂದ್ರಚೂಡ್, ಜಸ್ಟೀಸ್ ಅಶೋಕ್ ಭೂಷಣ್ ಹಾಗೂ ಜಸ್ಟೀಸ್ ಅಬ್ದುಲ್ ನಝೀರ್ ಸದಸ್ಯರನ್ನು ಒಳಗೊಂಡಿತ್ತು .
   ಪಂಚಪೀಠದ ಸದಸ್ಯರಲ್ಲಿ ಒಬ್ಬರಾಗಿರುವ ನ್ಯಾಯಮೂರ್ತಿ  ಅಬ್ದುಲ್ ನಜೀರ್ ಕರಾವಳಿಯವರು. ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ಸಮೀಪದ ಬೆಳುವಾಯಿ ಅವರ ಹುಟ್ಟೂರು. ಜ. 5, 1958ರಲ್ಲಿ ಹುಟ್ಟಿದ ಇವರು ಪ್ರಾಥಮಿಕ ಶಿಕ್ಷಣ ಮುಗಿಸಿ ಆ ಬಳಿಕ ಮೂಡಬಿದಿರೆಯ ಮಹಾವೀರ ಕಾಲೇಜಿನಲ್ಲಿ ಬಿಕಾಂ ಪದವಿ ಪಡೆದಿದ್ದರು. ಆ ಬಳಿಕ ನಂತರ ಮಂಗಳೂರಿನ ಎಸ್ ಡಿಎಂ ಕಾಲೇಜಿನಲ್ಲಿ ಕಾನೂನು ಪದವಿ ಅಭ್ಯಾಸಿಸಿದ್ದರು.
    1983ರಲ್ಲಿ ಅಬ್ದುಲ್ ನಜೀರ್ ಅವರು ಕರ್ನಾಟಕ ಹೈಕೋರ್ಟ್ ನಲ್ಲಿ ತಮ್ಮ ವಕೀಲಗಾರಿಕೆಯ ಅಭ್ಯಾಸ ಆರಂಭಿಸಿದರು. 2003ರವರೆಗೆ ಕರ್ನಾಟಕದ ಹೈಕೋರ್ಟ್ ನಲ್ಲಿ ವಕೀಲರಾಗಿ ಕಾರ್ಯ ನಿರ್ವಹಿಸಿದ್ದರು. 2003ರಲ್ಲಿ ಹೈಕೋರ್ಟ್ ನ ಜಡ್ಜಾಗಿ ಆಯ್ಕೆಯಾದ ಇವರು 2017ರಲ್ಲಿ ಸುಪ್ರೀಂ ಕೋರ್ಟ್ ಜಡ್ಜ್ ಆಗಿ ನೇಮಕವಾಗಿದ್ದರು. ಐತಿಹಾಸಿಕ ತ್ರಿವಳಿ ತಲಾಖ್ ಪ್ರಕರಣದ ಪಂಚ ಸದಸ್ಯ ಪೀಠದ ಏಕಮಾತ್ರ ಮುಸ್ಲಿಂ ನ್ಯಾಯಾಧೀಶರಾಗಿದ್ದರು. ಇದೀಗ ಮಹತ್ವದ ಅಯೋಧ್ಯೆ ವಿವಾದದ ತೀರ್ಪು ನೀಡಿದ ಸುಪ್ರೀಂ  ಕೋರ್ಟ್ ನ  ಪಂಚಪೀಠದ ಏಕೈಕ ಮುಸ್ಲಿಮ್ ನ್ಯಾಯಾಧೀಶರಾಗಿಯೂ ಕಾರ್ಯನಿರ್ವಹಿಸಿದ ಹೆಗ್ಗಳಿಕೆ ಅವರದು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link